ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ 2 ಗಂಟೆಗೆ ಪ್ರಮಾಣ ವಚನ ಸ್ವೀಕಾರ: ಪ್ರಮೋದ್ ಸಾವಂತ್ ಗೋವಾ ಮುಖ್ಯಮಂತ್ರಿ

Last Updated 19 ಮಾರ್ಚ್ 2019, 1:32 IST
ಅಕ್ಷರ ಗಾತ್ರ

ಪಣಜಿ: ಗೋವಾ ವಿಧಾನಸಭಾ ಸ್ಪೀಕರ್ ಆಗಿದ್ದ ಪ್ರಮೋದ್ ಸಾವಂತ್(45) ಸೋಮವಾರ ರಾತ್ರಿ 2 ಗಂಟೆಗೆ ಗೋವಾಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭಾನುವಾರ ನಿಧನರಾದ ಗೋವಾ ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್ ಅವರ ಅಂತ್ಯಕ್ರಿಯೆ ಸೋಮವಾರ ನೆರವೇರಿತು. ಅದರ ಬೆನ್ನಲೇ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆ ನಡೆದಿದೆ.

ಗೋವಾದ ಬಿಜೆಪಿ ಸರ್ಕಾರ ಮಿತ್ರ ಪಕ್ಷವಾಗಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಮತ್ತು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‍ಪಿ)ಯ ನಾಯಕರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಸಾವಂತ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಸೋಮವಾರ ರಾತ್ರಿ 11 ಗಂಟೆಗೆನಿಗದಿಯಾಗಿತ್ತು. ಆದರೆ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಮಿತ್ರ ಪಕ್ಷಗಳೊಂದಿಗೆ ಬಿಜೆಪಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಕ್ಕೆ ವಿಳಂಬವಾದ ಕಾರಣ ರಾತ್ರಿ 1.50ಕ್ಕೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಗಿತ್ತು.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 12 ಶಾಸಕರನ್ನು ಹೊಂದಿದ್ದು, ಗೋವಾ ಫಾರ್ವರ್ಡ್‌ ಪಾರ್ಟಿ ಮತ್ತು ಎಂಜಿಪಿಯಿಂದ ತಲಾ ಮೂರು ಶಾಸಕರು ಹಾಗೂ ಮೂವರು ಪಕ್ಷೇತರರ ಬಲದಿಂದ 21 ಸದಸ್ಯರ ಬೆಂಬಲದೊಂದಿಗೆ ಸರಳ ಬಹುಮತ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT