ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಪೂರ್ವ ಮಳೆ ಕುಸಿತ

Last Updated 3 ಜೂನ್ 2019, 20:10 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಳೆದ 65 ವರ್ಷಗಳ ಇತಿಹಾಸದಲ್ಲಿ ಎರಡನೇ ಬಾರಿಗೆ ಕಡಿಮೆ ಆಗಿದೆ ಎಂದು ಹವಾಮಾನ ಮುನ್ಸೂಚನೆ ನೀಡುವ ಖಾಸಗಿ ಸಂಸ್ಥೆ ಸ್ಕೈಮೆಟ್‌ ಸೋಮವಾರ ಹೇಳಿದೆ.

ಈ ವರ್ಷ ಮುಂಗಾರು ಪೂರ್ವ ಅವಧಿಯಾದ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಲ್ಲಿ ಶೇ 25ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹೇಳಿದೆ.

ಉತ್ತರ, ಕೇಂದ್ರ, ಪೂರ್ವ ಮತ್ತು ದಕ್ಷಿಣ ವಲಯದಲ್ಲಿ ಮಳೆ ಕೊರತೆ ಪ್ರಮಾಣ ಕ್ರಮವಾಗಿ ಶೇ 30, ಶೇ 18, ಶೇ 14 ಮತ್ತು ಶೇ 47ರಷ್ಟು ಆಗಿದೆ ಎಂದು ಸಂಸ್ಥೆಯು ತಿಳಿಸಿದೆ.

2012ರಲ್ಲಿ ಕೂಡ ಮುಂಗಾರು ಪೂರ್ವ ಮಳೆಯು ಶೇ 31ರಷ್ಟು ಕಡಿಮೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT