ಸೋಮವಾರ, ಫೆಬ್ರವರಿ 17, 2020
30 °C

ಮತ ಎಣಿಕೆ ದಿನ ಯೋಜಿತ ಗಲಭೆ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ವೈಎಸ್‌ಆರ್‌ಸಿಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಮತ ಎಣಿಕೆ ಸಂದರ್ಭದಲ್ಲಿ ಪೂರ್ವಯೋಜಿತ ಗಲಭೆಗಳು ನಡೆಯಲಿವೆ ಎಂದು ಆತಂಕ ವ್ಯಕ್ತಪಡಿಸಿರುವ ಯುವಜನ ಶ್ರಮಿಕ ರೈತು ಕಾಂಗ್ರೆಸ್‌ ಪಕ್ಷ(ವೈಎಸ್‌ಆರ್‌ಸಿಪಿ) ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ.

ಪತ್ರದಲ್ಲಿ, ‘ಆಡಳಿತ ಪಕ್ಷದ ಪರ ಎಣಿಕೆ ಪ್ರತಿನಿಧಿಗಳು 17–ಸಿ ಫಾರಂ ಅನ್ನು ನಕಲು ಮಾಡಬಹುದು ಮತ್ತು ಮತ ಎಣಿಕೆ ಕೇಂದ್ರಗಳಲ್ಲಿ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದು ಪ್ರಕ್ರಿಯೆ ವಿಳಂಬವಾಗುವಂತೆ ಮಾಡಬಹುದು. ಏಜೆಂಟ್‌ಗಳ ದಾಖಲೆಗಳ ಪರಿಶೀಲನೆ ಹಾಗೂ ಅನುಮೋದನೆ ಪ್ರಕ್ರಿಯೆಯೂ ವಿಳಂಬವಾಗಲಿದ್ದು, ಗಲಾಟೆ ಆಗಲಿದೆ. ಹಾಗಾಗಿ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಲಾಗಿದೆ.

ಎಲ್ಲ ಮತಎಣಿಕೆ ಕೇಂದ್ರಗಳ ಸಂಭಾಂಗಣದಲ್ಲಿ ಸ್ಟೀಲ್‌ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವ ಪಕ್ಷ, ಎಣಿಕೆ ಕೇಂದ್ರದ ಬಳಿ ಸೆಕ್ಷನ್‌ 144 ಜಾರಿಗೊಳಿಸಬೇಕು ಎಂದೂ ಕೋರಿದೆ.

ಯೋಜಿತ ಗಲಭೆ ಕುರಿತು ವೈಎಸ್‌ಆರ್‌ಸಿಪಿ ಆತಂಕ ವ್ಯಕ್ತಪಡಿಸಿ ಪತ್ರ ಬರೆದಿರುವುದನ್ನು ಚುನಾವಣಾ ಆಯೋಗದ ಆಯುಕ್ತ ಸುನೀಲ್‌ ಅರೋರ ಗಂಭೀರವಾಗಿ ಪರಿಗಣಿಸಿದ್ದಾರೆ. ವೈಎಸ್‌ಆರ್‌ಸಿಯ ಸಂಸದ ವಿಜಯ ಸಾಯಿ ರೆಡ್ಡಿ ಅವರು ಈ ಪತ್ರ ಬರೆದಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಲೋಕಸಭೆಯ 25 ಹಾಗೂ ವಿಧಾನಸಭೆಯ 175 ಸ್ಥಾನಗಳಿಗೆ ಏಪ್ರಿಲ್ 11ರಂದು ಚುನಾವಣೆ ನಡೆದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು