ಗುರುವಾರ , ಜೂನ್ 4, 2020
27 °C

ರಾಜಸ್ಥಾನ: ಅನ್ಯಧರ್ಮ ಕಾರಣ ಗರ್ಭಿಣಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಸ್ಥಾನ: ಗರ್ಭಿಣಿ ಅನ್ಯಧರ್ಮಕ್ಕೆ ಸೇರಿದವರೆಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನಿರಾಕರಿಸಿದ ಘಟನೆ ಇಲ್ಲಿನ ಭರತಪುರದಲ್ಲಿ ನಡೆದಿದೆ.

ಶನಿವಾರ ಇಲ್ಲಿನ ಜನನ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಕೂಡಲೆ ಆಕೆಯನ್ನು ಜೈಪುರ ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾರೆ. ಭರತಪುರದಿಂದ ದೂರ ಜೈಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗರ್ಭಿಣಿಯ ಪತಿ ಜೈಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಹೆರಿಗೆಯಾಗಿದೆ. ಕೂಡಲೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಗು ಮೃತಪಟ್ಟಿದೆ ಎಂದು ಎಎನ್ಐ ವರದಿ ಮಾಡಿದೆ. ವೈದ್ಯರು ಜೈಪುರ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದರು. ನಾವು ಭರತಪುರ ದಾಟಿರಲಿಲ್ಲ. ಆಗಲೇ ಪತ್ನಿಗೆ ಹೆರಿಗೆಯಾಯಿತು. ಗಂಡು ಮಗು. ಸ್ವಲ್ಪ ಸಮಯದ ನಂತರ ಮಗು ತೀರಿಕೊಂಡಿತು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು