ಭಾನುವಾರ, ಆಗಸ್ಟ್ 18, 2019
26 °C

ಯಾವುದೇ ಸವಾಲು ಎದುರಿಸಲು ಸೇನೆ ಸಿದ್ಧ: ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ 

Published:
Updated:

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್, ಪ್ರಸ್ತುತ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸವಾಲು ಎದುರಿಸಲು ನಮ್ಮ ಸೇನೆ ಸಿದ್ಧವಾಗಿದೆ ಎಂದಿದ್ದಾರೆ.

ಎಲ್ಲ ದೇಶಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತವೆ. ಈ ಬಗ್ಗೆ ಚಿಂತಿಸಬೇಡಿ. ಇದು ಸರ್ವೇ ಸಾಮಾನ್ಯ. ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ನಾವು ತುಂಬಾ ಚಿಂತೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ ರಾವತ್.

ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಪಡಿಸಿದ ನಂತರ ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನ ಹೆಚ್ಚಿನ ಸೇನೆ ನಿಯೋಜಿಸಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ರಾವತ್ ಈ ರೀತಿ ಉತ್ತರಿಸಿದ್ದಾರೆ.

ಸೇನೆ ದೇಶದ ಸೇವೆಗಾಗಿ ಸನ್ನದ್ಧವಾಗಿದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ನಾವು ಸಜ್ಜಾಗಿದ್ದೇವೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.
 

Post Comments (+)