ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಿರುದ್ಧದ ಹೋರಾಟಕ್ಕೆ ರಾಷ್ಟ್ರಪತಿ ಶ್ಲಾಘನೆ

Last Updated 27 ಮಾರ್ಚ್ 2020, 20:30 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ವ್ಯಾಪಕವಾಗುವುದನ್ನು ನಿಯಂತ್ರಿಸಲು ರಾಜ್ಯಗಳು ಕೈಗೊಂಡಿರುವ ಸಿದ್ಧತೆ ಕುರಿತಂತೆ ಮಾಹಿತಿ ಪಡೆಯಲು ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಎಲ್ಲ ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ ಹಾಗೂ ಉನ್ನತ ಆಡಳಿತಾಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು.

‘ದೇಶಕ್ಕೆ ಒದಗಿರುವ ಈ ಸವಾಲನ್ನು ಎದುರಿಸಲು ವೈದ್ಯಕೀಯ ಸಮುದಾಯ, ಸರ್ಕಾರದ ಸಿಬ್ಬಂದಿ ಹಾಗೂ ಇತರರ ಪ್ರಯತ್ನ ಅದ್ಭುತ’ ಎಂದು ರಾಷ್ಟ್ರಪತಿ ಕೋವಿಂದ್‌ ಶ್ಲಾಘಿಸಿದರು.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ಕೋವಿಡ್‌–19 ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಇದಕ್ಕಾಗಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮುಖಂಡರು, ಚಲನಚಿತ್ರ ಹಾಗೂ ಕ್ರೀಡಾರಂಗದ ಗಣ್ಯರು, ಸಾಹಿತಿಗಳು, ಕಲಾವಿದರನ್ನು ತೊಡಗಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

‘ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಕೆಲವು ಹಾಸಿಗೆಗಳನ್ನು ಕೋವಿಡ್‌ನಿಂದ ಬಳಲುವವರಿಗಾಗಿ ಮೀಸಲಿಡಬೇಕು’ ಎಂದೂ ಮನವಿ ಮಾಡಿದರು.‘ವಿಶ್ವವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳ ಶಿಕ್ಷಣ ಅಬಾಧಿತವಾಗಿರಬೇಕು. ಇದಕ್ಕಾಗಿ ಆನ್‌ಲೈನ್‌ ತರಗತಿಗಳ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು, ತರಬೇತಿ ನೀಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು’ ಎಂದು ರಾಜ್ಯಪಾಲರಿಗೆ ಸಲಹೆ ನೀಡಿದರು.

‘ವಿಶ್ವವಿದ್ಯಾಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕೇಂದ್ರೀಯ ವಿದ್ಯಾಲಯಗಳಲ್ಲಿನ ಕೆಲವು ಕೊಠಡಿಗಳನ್ನು ಕೋವಿಡ್‌ ರೋಗಿಗಳನ್ನು ದಾಖಲು ಮಾಡಲು ವಾರ್ಡ್‌ಗಳನ್ನಾಗಿ ಪರಿವರ್ತಿಸಬಹುದು. ಈ ಸಂಬಂಧ ವಿ.ವಿ ಮತ್ತು ಕೇಂದ್ರೀಯ ವಿದ್ಯಾಲಯಗಳು ಹಾಗೂ ಇತರ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರ ಮನವೊಲಿಸಿ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT