ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

47 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Last Updated 11 ಮಾರ್ಚ್ 2019, 19:49 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ (ಮರಣೋತ್ತರ), ಕನ್ನಡಿಗರಾದಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವ್, ಮಲಯಾಳ ಚಿತ್ರನಟ ಮೋಹನ್‌ಲಾಲ್, ಡ್ರಮ್ಸ್ ವಾದಕ ಆನಂದನ್ ಶಿವಮಣಿ, ಗಾಯಕ ಶಂಕರ್ ಮಹದೇವನ್ ಸೇರಿದಂತೆ 47 ಸಾಧಕರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ನಯ್ಯರ್ ಪರವಾಗಿ ಅವರ ಪತ್ನಿ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದರು. ಪದ್ಮಭೂಷಣ ಸ್ವೀಕರಿಸಿದ ಇತರ ಗಣ್ಯರಲ್ಲಿ ಮೋಹನ್‌ಲಾಲ್, ಅಕಾಲಿದಳ ನಾಯಕ ಸುಖದೇವ್ ಸಿಂಗ್ ದಿಂಡ್ಸಾ, ತಂತ್ರಜ್ಞಾನ ಕ್ಷೇತ್ರದ ದಿಗ್ಗಜಬಹುರಾಷ್ಟ್ರೀಯ ಕಂಪನಿ ಸಿಸ್ಕೊ ಸಿಸ್ಟಮ್ಸ್ ಮಾಜಿ ಸಿಇಒ ಜಾನ್ ಚೇಂಬರ್ಸ್, ಲೋಕಸಭೆಯ ಮಾಜಿ ಉಪಸಭಾಧ್ಯಕ್ಷ ಕರಿಯ ಮುಂಡ ಸೇರಿದ್ದಾರೆ.

ಪ್ರಭುದೇವ್‌,ಶಂಕರ್ ಮಹದೇವನ್, ನಿವೃತ್ತ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಕುಸ್ತಿಪಟು ಬಜರಂಗ್ ಪುನಿಯಾ ಅವರಿಗೆ ಪದ್ಮಶ್ರೀ ನೀಡಿ ಗೌರವಿಸಲಾಯಿತು.

ರಾಷ್ಟ್ರಪತಿ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕೌಶಲ ಹೊಂದಿರುವವರನ್ನು ಮಾತ್ರವಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸಿದ ಹಾಗೂ ಸಮಾಜವನ್ನು ಪ್ರಭಾವಿಸಿದವರನ್ನು ಗುರುತಿಸಿ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಪ್ರಶಸ್ತಿ ಪುರಸ್ಕೃತರಲ್ಲಿ ಸಮಾಜದ ಎಲ್ಲ ವರ್ಗದವರೂ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಈ ಬಾರಿ 112 ಸಾಧಕರನ್ನು ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿತ್ತು. ಉಳಿದ ಗಣ್ಯರಿಗೆ ಮಾರ್ಚ್ 16ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗೃಹಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT