16ನೇ ಲೋಕಸಭೆ ವಿಸರ್ಜಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌

ಗುರುವಾರ , ಜೂನ್ 20, 2019
27 °C

16ನೇ ಲೋಕಸಭೆ ವಿಸರ್ಜಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌

Published:
Updated:

ನವದೆಹಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು 16ನೇ ಲೋಕಸಭೆಯನ್ನು ಶನಿವಾರ ನಿಸರ್ಜಿಸಿದ್ದಾರೆ.

ಕೇಂದ್ರ ಸಚಿವ ಸಂಪುಟದ ಶಿಫಾರಸಿನ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.

16ನೇ ಲೋಕಸಭೆಯನ್ನು ವಿಸರ್ಜಿಸಿದ್ದಾಗಿ ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆ 16ನೇ ಲೋಕಸಭೆ ವಿಸರ್ಜನೆಗೆ ನಿರ್ಣಯ ಅಂಗೀಕರಿಸಿತ್ತು.

ಸಂಪೂರ್ಣ ಬಹುಮತ ಪಡೆದ ಎನ್‌ಡಿಎ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತೆ ಹೊಸ ಸರ್ಕಾರ ರಚಿಸಲಿದ್ದು, ಈ ಸಂಬಂಧ ಪಕ್ಷದಲ್ಲಿ ಚುರುಕಿನ ಚಟುವಟಿಕೆ ನಡೆಯುತ್ತಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !