‘ಆಯುಷ್ಮಾನ್ ಭಾರತ್’ ಯೋಜನೆಗೆ ರಾಷ್ಟ್ರಪತಿ ಶ್ಲಾಘನೆ

7

‘ಆಯುಷ್ಮಾನ್ ಭಾರತ್’ ಯೋಜನೆಗೆ ರಾಷ್ಟ್ರಪತಿ ಶ್ಲಾಘನೆ

Published:
Updated:

ಕಾನ್ಪುರ(ಉತ್ತರ ಪ್ರದೇಶ): ಪ್ರಧಾನಮಂತ್ರಿ ಆಯುಷ್ಮಾನ್‌ ಭಾರತ್‌ ಯೋಜನೆಯು ಪ್ರಪಂಚದ ಅತಿದೊಡ್ಡ ಆರೋಗ್ಯ ಯೋಜನೆಯಾಗಿದ್ದು, ಇದು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಆರೋಗ್ಯ ಸೇವೆ ಒದಗಿಸಲಿದೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ಆರೋಗ್ಯ, ಸಬಲೀಕರಣ ಕುರಿತು ನಗರದಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಶನಿವಾರ ಮಾತನಾಡಿದ ಅವರು, ‘10 ಕೋಟಿ ಕುಟುಂಬಗಳು ಮತ್ತು 50 ಕೋಟಿ ನಾಗರಿಕರಿಗೆ ನೆರವಾಗುವ ಸಾಮರ್ಥ್ಯವಿರುವ, ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದೆ’ ಎಂದು ಶ್ಲಾಘಿಸಿದ್ದಾರೆ.

ಇದೇ ವೇಳೆ ಹೆಣ್ಣುಮಕ್ಕಳ ಸಾಧನೆಯ ಬಗ್ಗೆಯೂ ಅವರು ವಿವರಿಸಿದರು. ‘ನಮ್ಮ ಸಮಾಜದಲ್ಲಿ ಗಂಡು ಮಕ್ಕಳಿಗೆ ಹೋಲಿಸಿದರೆ ಹುಡುಗಿಯರು ಹೆಚ್ಚಿನ ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ. ಹೀಗಿದ್ದರೂ ದೃಢಸಂಕಲ್ಪ ಮತ್ತು ಕೌಶಲ್ಯದೊಂದಿಗೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡುವತ್ತ ಸಾಗುತ್ತಿರುವುದು ಸ್ವಾಗತಾರ್ಹ. ಈ ಪ್ರವತ್ತಿಯನ್ನು ಪ್ರೋತ್ಸಾಹಿಸಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !