ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಎಲ್ಲಾ ರಾಜ್ಯಪಾಲರ ಜೊತೆ ರಾಷ್ಟ್ರಪತಿ ವಿಡಿಯೋ ಕಾನ್ಫರೆನ್ಸ್

Last Updated 2 ಏಪ್ರಿಲ್ 2020, 10:58 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿಗೆಸಂಬಂಧಿಸಿದಂತೆ ದೇಶದ ಎಲ್ಲಾ ರಾಜ್ಯಪಾಲರ ಜೊತೆ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಶುಕ್ರವಾರ (04-04-2020)ದಂದು ವಿಡಿಯೋ ಕಾನ್ಫರೆನ್ಸ್ನಡೆಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಎಲ್ಲಾ ರಾಜ್ಯಗಳ ರಾಜ್ಯಪಾಲರು, ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್‌‌ಗಳ ಜೊತೆ ವಿಡಿಯೋ ಮೂಲಕ ಸಂವಾದ ನಡೆಸಲಿದ್ದಾರೆ. ರಾಷ್ಟ್ರಪತಿ ಭವನದಿಂದಲೇ ಇಡೀ ದೇಶದ ಎಲ್ಲಾ ರಾಜ್ಯಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಈ ಸಂದರ್ಭದಲ್ಲಿ ಕೊರೊನಾ ಸಾಂಕ್ರಾಮಿಕ ಪಿಡುಗಿನ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೈಗೊಂಡಿರುವ ಕ್ರಮಗಳ ಕುರಿತು ವಿವರ ಪಡೆಯಲಿದ್ದಾರೆ ಎಂದು ರಾಷ್ಟ್ರಪತಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT