ಪ್ರಧಾನಿ ಮೋದಿ, ಸಚಿವೆ ನಿರ್ಮಲಾ, ರಾಹುಲ್‌ರಿಂದ ಕರುಣಾನಿಧಿಗೆ ಅಂತಿಮ ನಮನ

5
ಕುಟುಂಬದವರಿಗೆ ಸಾಂತ್ವನ

ಪ್ರಧಾನಿ ಮೋದಿ, ಸಚಿವೆ ನಿರ್ಮಲಾ, ರಾಹುಲ್‌ರಿಂದ ಕರುಣಾನಿಧಿಗೆ ಅಂತಿಮ ನಮನ

Published:
Updated:

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದರು.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದ ಮೋದಿ ನೇರವಾಗಿ ರಾಜಾಜಿ ಭವನಕ್ಕೆ ಬಂದರು. ಅವರ ಜತೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಇದ್ದರು.

ಅಂತಿಮ ದರ್ಶನ ಪಡೆದ ಬಳಿಕ ಕರುಣಾನಿಧಿ ಪುತ್ರ ಸ್ಟಾಲಿನ್ ಅವರನ್ನು ಸಂತೈಸಿದ ಮೋದಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.


 

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಹ ಅಗಲಿದ ನಾಯಕನಿಗೆ ನಮನ ಸಲ್ಲಿಸಿದರು.

 

ನಟರಾದ ರಜನಿಕಾಂತ್, ಕಮಲಹಾಸನ್, ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಸೇರಿದಂತೆ ಹತ್ತಾರು ಗಣ್ಯರು ಈಗಾಗಲೇ ಕರುಣಾನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಕರುಣಾನಿಧಿ ಗೌರವಾರ್ಥ ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಗಿದೆ.
 


ಮರೀನಾ ಬೀಚ್‌ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ ನಡೆಸಬಹುದು ಎಂದು ಮದ್ರಾಸ್‌ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸ್ಟಾಲಿನ್

ಇನ್ನಷ್ಟು ಸುದ್ದಿ...

ಕರುಣಾನಿಧಿ ಎಂಬ ದ್ರಾವಿಡ ಸೂರ್ಯ ಅಸ್ತಂಗತ

* ಮರೀನಾ ಬೀಚ್‌ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆ: ಮದ್ರಾಸ್‌ ಹೈಕೋರ್ಟ್ ತೀರ್ಪು

'ಪರಾಶಕ್ತಿ' ಸಿನಿಮಾದ ಚಿತ್ರಕಥೆ ಮೂಲಕ ಮೋಡಿ ಮಾಡಿದ್ದ ಕರುಣಾನಿಧಿ

ಕಣ್ಮರೆಯಾದರು ಕರುಣಾನಿಧಿ, ಜಯಲಲಿತಾ: ಬದಲಾಗಲಿದೆಯೇ ದ್ರಾವಿಡ ರಾಜಕಾರಣಮಾಡಿದ್ದ ಕರುಣಾನಿಧಿ

ಕಲೈಂಗರ್ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳು

ಕೋಲಾರದ ಚಿನ್ನದ ಗಣಿಗೆ ಇಳಿದಿದ್ದ ಕರುಣಾನಿಧಿ

ಕರುಣಾನಿಧಿ ಬದುಕಿನ ಹಾದಿ

ದ್ರಾವಿಡ ಆಂದೋಲನದ ಕೋಟೆ ಕಟ್ಟಿದ್ದ ರಾಜಕೀಯ ಪ್ರತಿಭೆ

* ‘ಣ್ಣಾ ಸಮಾಧಿ’ ಸಮೀಪ ಕರುಣಾನಿಧಿ ಅಂತ್ಯ ಕ್ರಿಯೆಗೆ ಒಪ್ಪದ ತಮಿಳುನಾಡು ಸರ್ಕಾರ

ಕರುಣಾನಿಧಿಗೆ ಉಂಟು ರಾಮನಗರದ ನಂಟು

ಕರುನಾಡ ಜತೆಗೆ ಕಾರುಣ್ಯದ ‘ನಿಧಿ’

’ಕರುಣಾನಿಧಿ’ ಗೌರವಾರ್ಥ ಅರ್ಧ ಮಟ್ಟದಲ್ಲಿ ರಾಷ್ಟ್ರಧ್ವಜ ಹಾರಾಟ

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !