ಭಾನುವಾರ, ಜನವರಿ 26, 2020
21 °C

ಹೊಸ ವರ್ಷಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2020ನೇ ವರ್ಷ ಸಮೃದ್ಧಿ, ಆರೋಗ್ಯ ತುಂಬಿದ ನೆಮ್ಮದಿಯ ವರ್ಷವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. 

ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟ್ಟರ್, ಇನ್‌ಸ್ಟಾಗ್ರಾಂ ಮೂಲಕ ನಾಡಿನ ಹಾಗೂ ದೇಶದ ಜನರಿಗೆ ಶುಭಾಶಯ ಹೇಳಿದ್ದಾರೆ.

2020ನೇ ವರ್ಷ ಸುಖ, ಸಮೃದ್ಧಿ, ನೆಮ್ಮದಿಯ ವರ್ಷವಾಗಲಿ. ರಾಜ್ಯದಾದ್ಯಂತ ಸಂಭ್ರಮ ನೆಲೆಸಲಿ. ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕರೆದೊಯ್ಯುವ ನಮ್ಮ ಸಂಕಲ್ಪಕ್ಕೆ ಆ ಭಗವಂತ ಮತ್ತಷ್ಟು ಬಲ ನೀಡಲಿ. ಮತ್ತೊಮ್ಮೆ ತಮ್ಮೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಟ್ವೀಟ್‌ ಮಾಡಿ ಶುಭಾಶಯ ಕೋರಿದ್ದಾರೆ.

ಈ ವರ್ಷ ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರಲಿ, ಎಲ್ಲರೂ ಆರೋಗ್ಯವಾಗಿರಲಿ ಮತ್ತು ಎಲ್ಲರ ಆಕಾಂಕ್ಷೆಗಳು ಈಡೇರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭಾಶಯ ಹೇಳಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು