ಶನಿವಾರ, ಜೂಲೈ 11, 2020
21 °C

ಇಂದು ಸಂಜೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಹಿ ಘಟನೆ ಮತ್ತು ಜುಲೈ 1ರಿಂದ ದೇಶ ಅನ್‌ಲಾಕ್‌ 2.0ಗೆ ಹೆಜ್ಜೆ ಇಟ್ಟಿರುವ ನಡುವೆಯೇ ನಿಗದಿಯಾಗಿರುವ ಈ ಭಾಷಣ ಸಹಜವಾಗಿಯೇ ಪ್ರಾಮುಖ್ಯತೆ ಗಳಿಸಿದೆ. 

‘ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಪ್ರಧಾನಿ ಕಚೇರಿ ಸೋಮವಾರ ರಾತ್ರಿ 10.19ರಲ್ಲಿ ಟ್ವೀಟ್ ಮಾಡಿ ತಿಳಿಸಿದೆ. 

ಕೊರೊನಾ ವೈರಸ್‌ ಸೋಂಕು ದೇಶಕ್ಕೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರು ಮಾಡುತ್ತಿರುವ 6ನೇ ಭಾಷಣ ಇದಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು