ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿಯಲ್ಲಿ ಸ್ಪರ್ಧಿಸದೆ ಇರುವುದು ಪ್ರಿಯಾಂಕಾ ಸ್ವಂತ ನಿರ್ಧಾರ

Last Updated 26 ಏಪ್ರಿಲ್ 2019, 14:40 IST
ಅಕ್ಷರ ಗಾತ್ರ

ನವದೆಹಲಿ: ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸದೆ ಇರುವುದು ಅವರ ವೈಯಕ್ತಿಕ ನಿರ್ಧಾರ ಎಂದು ಕಾಂಗ್ರೆಸ್ ಮುಖಂಡ ಸಾಮ್ ಪಿತ್ರೊಡಾ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ವಾರಾಣಸಿಯಲ್ಲಿ ಸ್ಪರ್ಧೆ ಮಾಡದೆ ಇರುವುದು ಅವರ ಸ್ವಂತ ನಿರ್ಧಾರ, ಒಂದು ಕಡೆ ರಾಷ್ಟ್ರದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕಡೆ ಗಮನ ಕೊಡಬೇಕು. ಅವುಗಳ ಜವಾಬ್ದಾರಿ ತುಂಬಾ ಮುಖ್ಯವಾಗಿರುವಾಗ ಕೇವಲ ಒಂದು ಸೀಟಿಗಾಗಿ ಹೆಚ್ಚು ಗಮನ ಕೊಡುವುದು ಸರಿಯಲ್ಲ ಎಂದು ಆಕೆ ಯೋಚಿಸಿರಬಹುದು. ಹಾಗಾಗಿ ನಿರ್ಧಾರ ಅವರಿಗೆ ಬಿಟ್ಟಿದ್ದು, ಅವರು ನಿರ್ಧರಿಸಿದ್ದಾರೆ ಎಂದು ಪಿತ್ರೊಡಾ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ಅವರು ನೇಮಕಗೊಂಡಿದ್ದಾರೆ. ಕಳೆದ ಒಂದು ವಾರದಿಂದ ಪ್ರಿಯಾಂಕಾ ಗಾಂಧಿ ವಾರಾಣಸಿಯಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು. ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು ವಾರಾಣಸಿ ಅಥವಾ ಅಲಹಾಬಾದ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಒತ್ತಾಯಿಸಿದ್ದರು. ಪಿತ್ರೋಡಾ ಅವರ ಹೇಳಿಕೆಯಿಂದಾಗಿ ಈ ಎಲ್ಲಾ ಊಹಾಪೋಹಗಳಿಗೂ ತೆರೆಎಳೆದಂತಾಗಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಇದೇ ಸಮಯದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 2014ರಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿದ್ದ ಅಜಯ್ ರಾಯ್ 75614 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಮೊದಲ ಸ್ಥಾನದಲ್ಲಿ ನರೇಂದ್ರ ಮೋದಿ 581022 ಮತಗಳನ್ನು ಪಡೆದಿದ್ದರು. ಅರವಿಂದ್ ಕೇಜ್ರಿವಾಲ್ 209238 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT