ಶುಕ್ರವಾರ, ಸೆಪ್ಟೆಂಬರ್ 20, 2019
21 °C

ಎನ್‌ಡಿಎ ಶತದಿನ ಸಂಭ್ರಮ | ಪ್ರಿಯಾಂಕಾ ತರಾಟೆ

Published:
Updated:

ನವದೆಹಲಿ (ಪಿಟಿಐ): ಅಧಿಕಾರಕ್ಕೆ ಬಂದು ಶತದಿನ ಪೂರೈಸಿದ ಸಂಭ್ರಮಾಚರಣೆಗೆ ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹರಿಹಾಯ್ದಿದ್ದಾರೆ.

ಆಟೊಮೊಬೈಲ್, ಸಾರಿಗೆ ಮತ್ತು ಗಣಿ ವಲಯಗಳು ಈ ಸಂಭ್ರಮಾಚರಣೆಯನ್ನು ತಮ್ಮ ಅವನತಿ ಎಂಬಂತೆ ಗಮನಿಸಲಿವೆ ಎಂದೂ ಅವರು ವ್ಯಂಗ್ಯವಾಡಿದ್ದಾರೆ.

ಕೇಂದ್ರ ಸರ್ಕಾರ ಶತದಿನ ಸಂಭ್ರಮಕ್ಕೆ ಸಿದ್ಧತೆ ನಡೆಸಿದೆ ಎಂಬುದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಿಯಾಂಕಾ, ಆಟೊಮೊಬೈಲ್‌ ಸೇರಿ ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಯನ್ನು ಅವರು ಉಲ್ಲೇಖಿಸಿದ್ದಾರೆ.

Post Comments (+)