ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ ಉ.ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಎಐಸಿಸಿ ಪ್ರಧಾನ ಉಸ್ತುವಾರಿ ಕಾರ್ಯದರ್ಶಿ

Last Updated 23 ಜನವರಿ 2019, 11:40 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ವಾದ್ರಾರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.ಬುಧವಾರ ಪ್ರಿಯಾಂಕಾ ಅವರನ್ನುಉತ್ತರ ಪ್ರದೇಶದ ಪೂರ್ವ ವಿಭಾಗದಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆಗಿ ಕಾಂಗ್ರೆಸ್ ನೇಮಕ ಮಾಡಿದೆ.

ಫೆಬ್ರುವರಿ ಮೊದಲ ವಾರ ಪ್ರಿಯಾಂಕಾ ಅಧಿಕಾರ ಸ್ವೀಕರಿಸಲಿದ್ದಾರೆ.ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.

80 ಲೋಕಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗೆಲುವು ಸಾಧಿಸಲೇ ಬೇಕಾದ ಅನಿವಾರ್ಯ ಪರಿಸ್ಥಿತಿ ಕಾಂಗ್ರೆಸ್‍ ಇದೆ. ಹಾಗಾಗಿ ಇಲ್ಲಿ ಗೆಲುವು ಸಾಧಿಸಲು ಪ್ರಿಯಾಂಕಾ ಅವರ ನೇತೃತ್ವ ಅಗತ್ಯ ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ.

ಕರ್ನಾಟಕದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಗೆ ಸಂಘಟನಾ ಉಸ್ತುವಾರಿಯನ್ನು ನೀಡಲಾಗಿದೆ.ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಪಶ್ಚಿಮ ಉತ್ತರ ಪ್ರದೇಶದ ಉಸ್ತುವಾರಿ,ಗುಲಾಂ ನಬಿ ಆಜಾದ್ ಅವರಿಗೆ ಹರಿಯಾಣದ ಉಸ್ತುವಾರಿಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT