ಸೋಮವಾರ, ಸೆಪ್ಟೆಂಬರ್ 20, 2021
25 °C

ದೆಹಲಿಯಲ್ಲಿ ಪ್ರಿಯಾಂಕಾ ಚುನಾವಣಾ ಪ್ರಚಾರ; ಕಾಲಹರಣ ಎಂದ ಕೇಜ್ರಿವಾಲ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವ ಮೂಲಕ ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದರು.

ಪ್ರಿಯಾಂಕಾ, ಇತರೆ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ದೆಹಲಿಯ ಉತ್ತರ ಹಾಗೂ ಇತರೆ ಭಾಗಗಳಲ್ಲಿ ಬುಧವಾರ ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು.

ದೆಹಲಿಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿ ಸಮಯ ಹಾಳು ಮಾಡುತ್ತಿರುವ ಪ್ರಿಯಾಂಕಾ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಯಾಕೆ ಪ್ರಚಾರ ಕಾರ್ಯ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದು, ಇವರು ಉತ್ತರ ಪ್ರದೇಶದಲ್ಲಿ ಎಸ್‌ಪಿ–ಬಿಎಸ್‌ಪಿ, ದೆಹಲಿಯಲ್ಲಿ ಎಎಪಿ ಪಕ್ಷದ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಜೊತೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಈ ಎರಡು ರಾಜ್ಯಗಳಿಗೆ ತೆರಳದೆ ನೇರವಾಗಿ ಬಿಜೆಪಿ ಎದುರಿಸಲು ಸಜ್ಜಾಗಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಮೇ 12ರಂದು ಚುನಾವಣೆ ನಡೆಯಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು