ಗುರುವಾರ , ಫೆಬ್ರವರಿ 20, 2020
22 °C

ಉತ್ತರಪ್ರದೇಶ: ಫೆ.23ಕ್ಕೆ ಪ್ರಿಯಾಂಕಾಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ಆಜಂಘರ್‌‌‌(ಉತ್ತರಪ್ರದೇಶ): ರೈತರ ಸಾಲಮನ್ನಾ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಇದೇ ತಿಂಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಪೂರ್ವ ವಲಯ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿ ಪ್ರತಿಭಟನೆ ನೇತೃತ್ವ ವಹಿಸಲಿದ್ದಾರೆ. ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂಬ ಬೇಡಿಕೆಯೂ ಸೇರಿದಂತೆ ಹಲವು ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳು ತಿಳಿಸಿವೆ.

ಪೂರ್ವಭಾವಿಯಾಗಿ ಸ್ಥಳೀಯ ಮುಖಂಡರೊಡನೆ ಚರ್ಚೆ ಮಾಡಲು ಬುಧವಾರ ಆಜಂಘರ್‌‌ಗೆ ಭೇಟಿ ನೀಡಿದ ಪ್ರಿಯಾಂಕಾ, ಇದೇ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ನಂತರ ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಂಧನ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಫೆ.23ರಿಂದ ಆರಂಭವಾಗುವ ಮೊದಲ ಪ್ರತಿಭಟನಾ ರ್ಯಾಲಿ ಇಲ್ಲಿನ ಬಸ್ತಿ ಜಿಲ್ಲೆಯಲ್ಲಿ ನಡೆಯಲಿದೆ. ಉತ್ತರಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು