ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ನೆರವಾಗದ ಕೃಷಿ ನೀತಿ: ಪ್ರಿಯಾಂಕಾ ತರಾಟೆ

Last Updated 27 ಜುಲೈ 2019, 19:56 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಪ್ರದೇಶದಲ್ಲಿ ಕೃಷಿ, ಸಾಲಮನ್ನಾ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಬುಂದೇಲ್‌ಖಂಡ್‌ ಬಾಂದಾದಲ್ಲಿ ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಕೃಷಿ ಉತ್ಪನ್ನಗಳಿಗೆ ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ನಷ್ಟಕ್ಕೆ ಪರಿಹಾರವೂ ಸಿಗುತ್ತಲ್ಲ’ ಎಂದು ಟ್ವೀಟ್‌ ಸಂದೇಶದಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

‘ಆಸ್ತಿ ಮುಟ್ಟುಗೋಲು ಹಾಕುವ ಬೆದರಿಕೆ ಕರೆಗಳು ಬುಂದೇಲ್‌ಖಂಡ್ ರೈತರಿಗೆ ನಿತ್ಯ ಬರುತ್ತಿವೆ. ರೈತರಿಗೆ ಆತ್ಮಹತ್ಯೆ ಬಿಟ್ಟು ಬೇರೆ ಮಾರ್ಗವೇ ಉಳಿದಿಲ್ಲ. ಅಲ್ಲ ಎಂಥ ಕೃಷಿ ನೀತಿ, ಸಾಲಮನ್ನಾ ನೀತಿ ಜಾರಿಯಲ್ಲಿದೆ’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT