ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ನಂಟು: ಎನ್ಐಎ ಶೋಧ

Last Updated 17 ಜನವರಿ 2019, 16:51 IST
ಅಕ್ಷರ ಗಾತ್ರ

ನವದೆಹಲಿ: ಐಎಸ್ ಉಗ್ರ ಸಂಘಟನೆಯಿಂದ ಪ್ರಭಾವಕ್ಕೊಳಗಾಗಿರುವಸಂಘಟನೆ ವಿರುದ್ಧದ ತನಿಖೆಯ ಭಾಗವಾಗಿ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ, ಪಶ್ಚಿಮ ಉತ್ತರ ಪ್ರದೇಶ ಹಾಗೂ ಪಂಜಾಬ್‌ನ ಎಂಟು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವ ‘ಹರ್ಕತ್ ಉಲ್ ಹರ್ಬ್ ಎ ಇಸ್ಲಾಂ’ ಎನ್ನುವ ಸಂಘಟನೆ ದೆಹಲಿ ಹಾಗೂ ಉತ್ತರ ಭಾರತದ ಹಲವೆಡೆ ಸರ್ಕಾರಿ ಕಟ್ಟಡಗಳು, ರಾಜಕಾರಣಿಗಳನ್ನು ಗುರಿಯಾಗಿರಿಸಿ ಆತ್ಮಾಹುತಿ ಹಾಗೂ ಸರಣಿ ಬಾಂಬ್ ದಾಳಿಗಳನ್ನು ನಡೆಸಲು ಸಂಚು ಮಾಡಿತ್ತು. ಜ.12ರಂದು ಉತ್ತರ ಪ್ರದೇಶದ ಹಾಪುರ್‌ನಲ್ಲಿ ಮೊಹಮ್ಮದ್ ಅಬ್ಸರ್ (24) ಎಂಬಾತನನ್ನು ಎನ್‌ಐಎ ಬಂಧಿಸಿತ್ತು. ಡಿ.26ರಿಂದ ಈ ತನಕ ಪ್ರಕರಣ ಸಂಬಂಧ ಒಟ್ಟು 12 ಜನರನ್ನು ಬಂಧಿಸಲಾಗಿದೆ. ಬಂಧಿತರ ವಿಚಾರಣೆಯಿಂದ ತಿಳಿದ ಮಾಹಿತಿ ಆಧರಿಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಎನ್‌ಐಎ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT