ಶುಕ್ರವಾರ, ಅಕ್ಟೋಬರ್ 18, 2019
23 °C

ಪರವಾನಗಿ ರದ್ದತಿಗೆ ಚಾಲನೆ

Published:
Updated:

ಚಂಡೀಗಡ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರ ಸ್ಕೈ ಲೈಟ್‌ ಹಾಸ್ಪಿಟಾಲಿಟಿ ಕಂಪನಿಗೆ ಭೂ ಅಭಿವೃದ್ಧಿ ಸಂಬಂಧ ನೀಡಿದ್ದ ಪರವಾನಗಿಯನ್ನು ರದ್ದುಪಡಿಸುವ ಪ್ರಕ್ರಿಯೆಗೆ ಹರಿಯಾಣ ಸರ್ಕಾರ ಚಾಲನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಹರಿಯಾಣ ಅಭಿವೃದ್ಧಿ ಮತ್ತು ನಿಯಂತ್ರಣ ಹಾಗೂ ನಗರ ಪ್ರದೇಶಗಳ ಕಾಯ್ದೆ, 1975ರ ನಿಬಂಧನೆಗಳಿಗೆ ಅನುಗುಣವಾಗಿ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಿಸಿದವರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಯೋಜನಾ ವಿಭಾಗದ ನಿರ್ದೇಶಕ ಕೆ.ಎಂ.ಪಾಂಡುರಂಗ ಹೇಳಿದರು.

Post Comments (+)