ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಜೆಐ ವಿರುದ್ಧದ ಆರೋಪ:ಸ್ವತಂತ್ರ ತನಿಖಾ ಸಮಿತಿಗೆ ಆಗ್ರಹ

Last Updated 23 ಏಪ್ರಿಲ್ 2019, 20:07 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸ್ವತಂತ್ರ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಹಾಗೂ ಲೇಖಕರು ಆಗ್ರಹಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದಪ್ರಶಾಂತ್ ಭೂಷಣ್, ಅರುಣಾ ರಾಯ್, ಮೇಧಾ ಪಾಟ್ಕರ್, ಲೇಖಕಿ ಅರುಂಧತಿ ರಾಯ್, ಪತ್ರಕರ್ತ ಪಿ.ಸಾಯಿನಾಥ್, ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಸಿಪಿಐ ನಾಯಕಿ ಆ್ಯನಿ ರಾಜಾ ಸೇರಿದಂತೆ 33 ಜನರು ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದಾರೆ.

‘ಇದು ನ್ಯಾಯಾಂಗಕ್ಕೆ ತೀವ್ರ ಸಂಕಷ್ಟದ ಸಮಯ.ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ವಿಶ್ವಾಸಾರ್ಹವಾಗಿ ನಿರ್ವಹಿಸದೆ ಇದ್ದರೆ, ಜನರು ನ್ಯಾಯಾಂಗದಲ್ಲಿ ಇಟ್ಟಿರುವ ನಂಬಿಕೆ ಕಳೆದುಕೊಳ್ಳಲಿದ್ದಾರೆ’ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

‘ತಮ್ಮ ವಿರುದ್ಧದ ಆರೋಪದ ವಿಚಾರಣೆ ನಡೆಸಲು ಗೊಗೊಯಿತಮ್ಮದೇ ನೇತೃತ್ವದಲ್ಲಿ ವಿಶೇಷ ನ್ಯಾಯಪೀಠ ರಚಿಸಿರುವುದು ಕಾನೂನಿಗೆ ವಿರುದ್ಧವಾದುದು. ಆದ್ದರಿಂದ ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ ಮಹಿಳೆ ನೇತೃತ್ವದಲ್ಲಿಸ್ವತಂತ್ರ ಸಮಿತಿ ರಚಿಸಿ ವಿಚಾರಣೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಸುಪ್ರೀಂಕೋರ್ಟ್‌ನ ಎಲ್ಲಾ ನ್ಯಾಯಮೂರ್ತಿಗಳಿಗೆ ಮನವಿ ಮಾಡುತ್ತೇವೆ’ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT