ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ಮಂಡನೆ

Last Updated 17 ಫೆಬ್ರುವರಿ 2020, 5:49 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸಿ ಉತ್ತರ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ ಸಿಪಿಐ ಸಂಸದೀಯ ಪಕ್ಷದ ನಾಯಕ ಬಿನೊಯ್‌ ವಿಶ್ವಂ ಅವರು ಹಕ್ಕುಚ್ಯುತಿ ಮಂಡಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ನೀಡಿದ ಹೇಳಿಕೆಯನ್ನು ಪ್ರಧಾನಿ ಅವರು ತಪ್ಪಾಗಿ ಬಿಂಬಿಸಿದ್ದಾರೆ ಎಂದು ದೂರಿದ್ದಾರೆ.

ತಮ್ಮ ವೈಯಕ್ತಿಕ ರಾಜಕೀಯ ಕಾರ್ಯಸೂಚಿಗಾಗಿ ಮೋದಿ ಅವರು, ವಿಜಯನ್‌ ಅವರ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಹೇಳಿದ್ದಾರೆ.

’ಕೇರಳದ ಮುಖ್ಯಮಂತ್ರಿ ಏನು ಹೇಳಿದ್ದರು ಎನ್ನುವುದನ್ನು ಎಡಪಕ್ಷಗಳು ಅರಿತುಕೊಳ್ಳಬೇಕಾಗಿತ್ತು. ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತೀವ್ರವಾದಿಗಳು ಸಹ ಪಾಲ್ಗೊಂಡಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳುವುದಾಗಿಯೂ ಹೇಳಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ, ಸಿಎಎಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಈ ರೀತಿ ಹೇಳಿರಲಿಲ್ಲ. ಇದು ದಾರಿ ತಪ್ಪಿಸುವುದಾಗಿದೆ’ ಎಂದು ವಿಶ್ವಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT