ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ ವಿಚಾರದಲ್ಲಿ ಪಕ್ಷಭೇದ ಮರೆತು ಹೆಜ್ಜೆ ಇಡಲು ನಿರ್ಧಾರ: ಸದಾನಂದ ಗೌಡ

Last Updated 20 ಡಿಸೆಂಬರ್ 2018, 6:12 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ ಅವರ ದೆಹಲಿ ನಿವಾಸದಲ್ಲಿ ಗುರುವಾರ ನಡೆದ ವಿಶೇಷ ಸಭೆಯಲ್ಲಿ, ರಾಜ್ಯದ ಹಿತಕ್ಕಾಗಿಪಕ್ಷಭೇದ ಮರೆತು ಹೋರಾಟ ನಡೆಸಲು ರಾಜ್ಯದ ನಾಯಕರು ನಿರ್ಧರಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಸದಾನಂದ ಗೌಡ, ’ರಾಜ್ಯದ ಸಂಸದರು, ನೀರಾವರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ,ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಜಾರಿಯಾಗಬೇಕಾದ ನೀರಾವರಿ ಯೋಜನೆಗಳ ವಿಷಯದಲ್ಲಿ ಪಕ್ಷಾತೀತವಾಗಿ, ಒಗ್ಗಟ್ಟಿನಿಂದ ಹೆಜ್ಜೆ ಇಡಲು ನಿರ್ಧರಿಸಲಾಯಿತು. ಮೇಕೆದಾಟು ವಿಚಾರದ ಬಗ್ಗೆ ಎಐಎಡಿಎಂಕೆ ಸದಸ್ಯರೊಂದಿಗೆಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ‘ ಎಂದು ಹೇಳಿದರು.

’ಬೇರೆ ರಾಜ್ಯದವರಿಂದ ಸ್ಥಗಿತಗೊಂಡಿರುವ ನೀರಾವರಿ ಯೋಜನೆಗಳಿಗೆ ಒಪ್ಪಿಗೆ ನೀಡಲು ಒತ್ತಾಯಿಸಿ ರಾಜ್ಯದ ಸಂಸದರು ಒಟ್ಟಾಗಿ ಡಿ.27ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ‘ ಎಂದರು.

ವಿಶೇಷ ಸಭೆಯಲ್ಲಿ ಪಾಲ್ಗೊಂಡಿರುವ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಮುಖಂಡರು
ವಿಶೇಷ ಸಭೆಯಲ್ಲಿ ಪಾಲ್ಗೊಂಡಿರುವ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಮುಖಂಡರು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಯೋಜನೆ ವಿರೋಧಿಸಿ ತಮಿಳುನಾಡು ಸಂಸದರು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT