ಹೆದ್ದಾರಿ ತಡೆದು ರೇಷ್ಮೆ ಬೆಳೆಗಾರರ ಪ್ರತಿಭಟನೆ

ಬುಧವಾರ, ಜೂನ್ 19, 2019
28 °C

ಹೆದ್ದಾರಿ ತಡೆದು ರೇಷ್ಮೆ ಬೆಳೆಗಾರರ ಪ್ರತಿಭಟನೆ

Published:
Updated:

ರಾಮನಗರ: ರೇಷ್ಮೆಗೂಡು ಧಾರಣೆ ಕುಸಿತ ಖಂಡಿಸಿ ರೈತರು ಇಲ್ಲಿನ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ಮುಂಭಾಗ ಶುಕ್ರವಾರ ಬೆಳಿಗ್ಗೆ ರಸ್ತೆ ತಡೆ ನಡೆಸಿದರು.

ಬೆಳಿಗ್ಗೆ 9.30ರ ಸುಮಾರಿಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ರೇಷ್ಮೆ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.

ಕಳೆದ ಕೆಲವು ದಿನಗಳಿಂದ ಗೂಡು ಧಾರಣೆ ಕುಸಿಯುತ್ತಲೇ ಇದೆ. ಸರ್ಕಾರ ನೀಡುವ ಪ್ರೋತ್ಸಾಹ ಧನ ಯಾವ ರೈತರನ್ನೂ ತಲುಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜು ಸಮಿತಿ ವರದಿಯಂತೆ‌ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. 

ಬೆಳಿಗ್ಗೆ 10ಕ್ಕೆ ಗೂಡು ಹರಾಜು ಪ್ರಕ್ರಿಯೆ ಆರಂಭಗೊಂಡ ಕಾರಣ ರೈತರು ಪ್ರತಿಭಟನೆ ಕೈಬಿಟ್ಟು ಮಾರುಕಟ್ಟೆಯ ಒಳನಡೆದರು. ಪ್ರತಿಭಟನೆಯಿಂದಾಗಿ‌ ಕೆಲ ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !