‘ವಿದ್ಯಾರ್ಥಿಗಳಿಗೆ ಉಚಿತ ಶೂ ಕೊಡಿ’

7

‘ವಿದ್ಯಾರ್ಥಿಗಳಿಗೆ ಉಚಿತ ಶೂ ಕೊಡಿ’

Published:
Updated:

ನವದೆಹಲಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಪ್ರಕಾರ ಖಾಸಗಿ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತವಾಗಿ ಶೂ ಪೂರೈಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಶಿಫಾರಸು ಮಾಡಿದೆ. 

ಶಿಕ್ಷಣ ಹಕ್ಕು ನಿಯಮಗಳ ಪ್ರಕಾರ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಉಚಿತವಾಗಿ ವಿತರಿಸಬೇಕು. ಆದರೆ ಪಾದರಕ್ಷೆ ಅದರಲ್ಲಿ ಸೇರುವುದಿಲ್ಲ. ದೇಶದ ಹವಾಮಾನದಲ್ಲಿ ಭಾರಿ ವ್ಯತ್ಯಾಸ ಆಗುತ್ತಿರುತ್ತದೆ. ಮಕ್ಕಳ ನೈರ್ಮಲ್ಯ ಮತ್ತು ಆರೋಗ್ಯ ರಕ್ಷಣೆಯಲ್ಲಿ ಪಾದರಕ್ಷೆಗಳು ಮಹತ್ವದ ಪಾತ್ರ ವಹಿಸುತ್ತವೆ. ಹಾಗಾಗಿ ಶಾಲೆಗೆ ಬರುವಾಗ ಮಕ್ಕಳು ಪಾದರಕ್ಷೆ ಧರಿಸುವುದು ಅಗತ್ಯ ಎಂದು ಎನ್‌ಸಿಪಿಸಿಆರ್‌ ಹೇಳಿದೆ. 

ಆರ್‌ಟಿಇ ನಿಯಮಗಳ ಅಡಿಯಲ್ಲಿ ಶೂ ಒದಗಿಸುವಂತೆ ರಾಜ್ಯಗಳಿಗೂ ಆಯೋಗ ಪತ್ರ ಬರೆದಿದೆ. ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಪಾದರಕ್ಷೆ ನೀಡುವ ಯೋಜನೆ ಜಾರಿಯಲ್ಲಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !