ಸೇನಾ ಶಿಬಿರದಲ್ಲಿ ಹುತಾತ್ಮ ಯೋಧರಿಗೆ ನಮನ

ಸೋಮವಾರ, ಮೇ 27, 2019
23 °C

ಸೇನಾ ಶಿಬಿರದಲ್ಲಿ ಹುತಾತ್ಮ ಯೋಧರಿಗೆ ನಮನ

Published:
Updated:

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಉಗ್ರರು ನಡೆಸಿದ ಸ್ಫೋಟದಲ್ಲಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಗಳನ್ನು ಬುದ್‌ಗಾಂನಲ್ಲಿನ ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ಇರಿಸಿ ಗೌರವ ಸಲ್ಲಿಸಲಾಗಿದೆ.

ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಅಪರಾಹ್ನ 3.15ರ ಹೊತ್ತಿಗೆ ಉಗ್ರರು ಅತ್ಯಂತ ಘೋರ ಕೃತ್ಯ ಎಸಗಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಜೈಷ್‌–ಎ–ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್‌ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಶುಕ್ರವಾರ ಯೋಧರ ಪಾರ್ಥಿವ ಶರೀರಗಳನ್ನು ಸೇನಾ ಕ್ಯಾಂಪ್‌ನಲ್ಲಿ ಇರಿಸಿ, ರಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಗಿದೆ. ಬಳಿಕ ಅವರ ಶರೀರಗಳನ್ನು ಅಂತ್ಯಕ್ರಿಯೆಗೆ ಕಳುಹಿಸಿಕೊಡಲಿದೆ.

ಘಟನೆಗೆ ದೇಶವ್ಯಾಪಿ ತೀವ್ರ ಖಂಡನೆ ವ್ಯಕ್ತವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಸ್ಥಳೀಯ ನಾಗರಿಕರು ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆದಿದ್ದಾರೆ.

ಶ್ರೀನಗರಕ್ಕೆ ರಾಜನಾಥ ಸಿಂಗ್
ಘಟನೆಯ ಸುದ್ದಿ ತಳಿದ ತಕ್ಷಣ ತಮ್ಮ ಇಂದಿನ ರ‍್ಯಾಲಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು ಇಂದು ದೆಹಲಿಯಿಂದ ಶ್ರೀನಗರಕ್ಕೆ ತೆರಳಿದರು.
 

ದೆಹಲಿಯಲ್ಲಿನ ಪಾಕಿಸ್ತಾನ ಐ ಕಮಿಷನ್ ಕಚೇರಿ ಮುಂದೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 


ಸ್ಫೋಟದ ತೀವ್ರತೆಗೆ ಛಿದ್ರಗೊಂಡಿರುವ ಬಸ್‌ –ರಾಯಿಟರ್ಸ್‌ ಚಿತ್ರ

* ಇವನ್ನೂ ಓದಿ...

ಕಾಶ್ಮೀರದ ಅವಂತಿಪೋರಾದಲ್ಲಿ ಉಗ್ರರ ದಾಳಿ: 44 ಯೋಧರು ಬಲಿ

‘ಉಗ್ರರ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವುದರಲ್ಲಿ ವಿಫಲವಾದದ್ದೇ ದಾಳಿಗೆ ಕಾರಣ’

ಯೋಧರ ತ್ಯಾಗಕ್ಕೆ ಪ್ರತೀಕಾರ ಖಚಿತ

ರಕ್ಷಣಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ, ಯೋಧರ ಶೌರ್ಯದಲ್ಲಿ ನಂಬಿಕೆ ಇದೆ: ಮೋದಿ​

ಪುಲ್ವಾಮಾ ದಾಳಿ ಪಾಕಿಸ್ತಾನ ‘ಹತಾಶೆ’ಯ ಫಲಿತಾಂಶ: ಸತ್ಯಪಾಲ್‌ ಮಲಿಕ್‌ ಹೇಳಿಕೆ​

ದಾಳಿ ನಡೆಸಿದ ಉಗ್ರ ಸಂಘಟನೆ ಮುಖ್ಯಸ್ಥ ಅಜರ್‌ಗೆ ಪಾಕ್‌ನಲ್ಲಿ ಪೂರ್ಣ ಸ್ವಾತಂತ್ರ್ಯ​

* ‘ಪಾಕಿಸ್ತಾನ ನಾಶವಾಗದ ಹೊರತು, ವಿಶ್ವ ಶಾಂತಿ–ಪ್ರಾದೇಶಿಕ ಭದ್ರತೆ ಅಸಾಧ್ಯ’

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !