ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧರಿಗೆ ಅಂತಿಮ ನಮನ ಸಲ್ಲಿಸಿ, ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ರಾಜನಾಥ ಸಿಂಗ್

Last Updated 15 ಫೆಬ್ರುವರಿ 2019, 10:43 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಉಗ್ರರು ನಡೆಸಿದ ಸ್ಫೋಟದಲ್ಲಿ ಹುತಾತ್ಮರಾದ ಯೋಧರಿಗೆ ಬುದ್‌ಗಾಂನಲ್ಲಿನ ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಗೌರವ ನಮನ ಸಲ್ಲಿಸಿದರು.

ಬೆಳಿಗ್ಗೆ ದೆಹಲಿಯಿಂದ ಇಲ್ಲಿಗೆ ಬಂದಿಳಿದ ರಾಜನಾಥ್ ಅವರು, ಯೋಧರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚರಿಸಿ ನಮನ ಸಲ್ಲಿಸಿದರು.

ರಾಜನಾಥ ಸಿಂಗ್‌ ಮತ್ತು ಜಮ್ಮು ಮತ್ತು ಕಾಶ್ಮೀರಡಿಜಿಪಿ ದಿಲ್ಬಾಗ್‌ ಸಿಂಗ್‌ ಅವರು ಸೈನಿಕರ ಪಾರ್ಥಿವ ಶರೀರಗಳಿಗೆಹೆಗಲು ನೀಡಿದರು.

ದೇಶವು ಎಂದಿಗೂ ಸರ್ವೋಚ್ಛ ಯೋಧರ ತ್ಯಾಗವನ್ನು ಮರೆಯುವುದಿಲ್ಲ. ಶ್ರೀನಗರದಲ್ಲಿ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದೆ. ಅವರ ತ್ಯಾಗವು ವ್ಯರ್ಥವಾಗಲು ಬಿಡುವುದಿಲ್ಲ ಎಂದು ರಾಜನಾಥ ಸಿಂಗ್‌ ಅವರು ಟ್ವೀಟ್‌ ಮಾಡಿದ್ದಾರೆ.

ರಾಜನಾಥ ಸಿಂಗ್‌, ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್‌ ಮಲಿಕ್ ಮತ್ತು ಸೇನೆಯ ಉತ್ತರ ಕಮಾಂಡ್‌ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ರಣಬೀರ್‌ ಸಿಂಗ್‌ ಅವರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

‘ವೀರ್‌ ಜವಾನ್‌ ಅಮರ್‌ ರಹೇ’ ಘೋಷಣೆ ಮೊಳಗಿಸುವ ಮೂಲಕ ಸೇನಾ ಶಿಬಿರದಲ್ಲಿ ಯೋಧರಿಗೆ ಗೌರವ ಸಲ್ಲಿಸಲಾಯಿತು.

* ಇವನ್ನೂ ಒದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT