ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘೋರ ದಾಳಿಗೆ ಪ್ರತೀಕಾರ ನೀಡುತ್ತೇವೆ: ಸಿಆರ್‌ಪಿಎಫ್‌ ತೀಕ್ಷ್ಣ ಪ್ರತಿಕ್ರಿಯೆ

Last Updated 15 ಫೆಬ್ರುವರಿ 2019, 9:58 IST
ಅಕ್ಷರ ಗಾತ್ರ

ನವದೆಹಲಿ:ಉಗ್ರರುನಡೆಸಿದ ಘೋರ ದಾಳಿಗೆ ನಾವು ಪ್ರತೀಕಾರ ನೀಡುತ್ತೇವೆ ಎಂದು ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ತೀಕ್ಷಣವಾಗಿ ಪ್ರತಿಕ್ರಿಯಿಸಿದೆ.

'ದಾಳಿಯನ್ನು ನಾವು ಮರೆಯುವುದಿಲ್ಲ, ನಾವು ಕ್ಷಮಿಸಲು ಸಾಧ್ಯವಿಲ್ಲ. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ನಮ್ಮ ಯೋಧರಿಗೆ ವಂದಿಸುತ್ತೇವೆ ಮತ್ತು ಹುತಾತ್ಮ ಸಹೋದರರ ಕುಟುಂಬದೊಂದಿಗೆ ನಿಲ್ಲುತ್ತೇವೆ. ಈ ಘೋರ ದಾಳಿಗೆ ಪ್ರತೀಕಾರ ನೀಡಲಾಗುವುದು’ ಎಂದು ಸಿಆರ್‌ಪಿಎಫ್‌ ಟ್ವೀಟ್‌ ಮಾಡಿದೆ.

ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಗೌರವಾರ್ಥ ಸಿಆರ್‌ಪಿಎಫ್‌ನ ಎಲ್ಲಾ ವಿಭಾಗದಲ್ಲಿ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು ಮತ್ತು ಸಿಆರ್‌ಪಿಎಫ್‌ನ ಧ್ವಜವನ್ನು ಇಂದು ಅರ್ಧಮಟ್ಟಕ್ಕೆ ಹಾರಿಸಿ ಗೌರವ ನೀಡಲಾಗಿದೆ.

ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಅಪರಾಹ್ನ 3.15ರ ಹೊತ್ತಿಗೆ ಉಗ್ರರು ಅತ್ಯಂತ ಘೋರ ಕೃತ್ಯ ಎಸಗಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಜೈಷ್‌–ಎ–ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್‌ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಆರ್‌ಪಿಎಫ್‌ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ದೇಶದ ಜನ ನಿಮ್ಮೊಟ್ಟಿಗೆ ನಾವಿದ್ದೇವೆ. ಉಗ್ರರನ್ನು ನಿರ್ನಾಮ ಮಾಡಿ ಎಂದು ವ್ಯಾಪಕವಾಗಿ ಬೆಂಬಲ ಸೂಚಿಸಿದ್ದಾರೆ.

* ಇವನ್ನೂ ಒದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT