ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾ ದಾಳಿ: ಪ್ರಧಾನಿ ಮೋದಿ, ಅಮಿತ್ ಶಾ ಅವರ ಪೂರ್ವನಿಗದಿತ ಕಾರ್ಯಕ್ರಮ ರದ್ದು

Last Updated 15 ಫೆಬ್ರುವರಿ 2019, 6:01 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು ಮತ್ತು ಕಾಶ್ಮೀರದಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯ ಹಿನ್ನಲೆಯಲ್ಲಿ ಶುಕ್ರವಾರದಂದು ನಿಗದಿಯಾಗಿದ್ದ ರಾಜಕೀಯ ಕಾರ್ಯಕ್ರಮಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರದ್ದುಪಡಿಸಿದ್ದಾರೆ.

ಮಧ್ಯಪ್ರದೇಶದ ಇಟಾರ್ಸಿ ಹಾಗೂ ಧಾರ್‌ನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿವೆ. ಮಹಾರಾಷ್ಟ್ರದ ನಾಗ್ಪುರ ಮತ್ತು ಧುಲೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ದಾಳಿಯನ್ನು ಖಂಡಿಸಿದ್ದ ಮೋದಿ ಅವರು, ‘ಸಿಆರ್‌ಪಿಎಫ್‌ ಸಿಬ್ಬಂದಿಯ ಮೇಲಿನ ದಾಳಿಯು ತುಚ್ಛವಾದದ್ದದು.ಹಠಾತ್ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ‘ಧೀರ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹುತಾತ್ಮ ಯೋಧರ ಕುಟುಂಬಗಳ ಜೊತೆ ಇಡೀ ದೇಶದ ಜನ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ’ ಎಂದೂ ಟ್ವೀಟ್‌ ಮಾಡಿದ್ದರು.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೂ ತಮ್ಮ ಪೂರ್ವನಿಗದಿತ ರಾಜಕೀಯ ಕಾರ್ಯಕ್ರಮಗಳನ್ನು ರದ್ದುಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT