ಪುಲ್ವಾಮ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

7

ಪುಲ್ವಾಮ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Published:
Updated:

ಪುಲ್ವಾಮ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕುನ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಶನಿವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಖಚಿತ ಮಾಹಿತಿ ಆದರಿಸಿ ಉಗ್ರರಿಗಾಗಿ ಶೋಧ ನಡೆಸಲಾಯಿತು. ಭದ್ರತಾ ಸಿಬ್ಬಂದಿ ನಡೆಸಿದ ಸಣ್ಣದೊಂದು ಪ್ರತಿ ದಾಳಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪುಲ್ವಾಮದ ಐಜಿಪಿ ಮತ್ತು ಎಸ್‌ಪಿ ಪಾಣಿ ತಿಳಿಸಿದ್ದಾರೆ.

ಹತ್ಯೆಯಾದ ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ಗೆ ಸೇರಿದವರು. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವೇಳೆ ಯಾವುದೇ ಆಸ್ತಿಗೆ ಹಾನಿಯಾಗಲಿಲ್ಲ. ಉಗ್ರರಿಗಾರಿ ಶೋಧ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.

ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಯೋಧನಿಗೆ ಗಾಯ
ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಪಡೆ ಕಾಶ್ಮೀರದ ಸುಂದರ್‌ಬನಿ ವಲಯದಲ್ಲಿ ಇಂದು ಬೆಳಿಗ್ಗೆ 9.45ಕ್ಕೆ ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನ ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಭಾರತೀಯ ಸೇನೆಯ ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !