ಶುಕ್ರವಾರ, ಏಪ್ರಿಲ್ 23, 2021
32 °C

‘ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ವರವರವ ರಾವ್ ಪಾತ್ರ’

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ‘ನಕ್ಸಲರಿಗಾಗಿ ನೇಪಾಳದಿಂದ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಿದ್ದರಲ್ಲಿ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಅವರ ನೇರ ಪಾತ್ರವಿದೆ’ ಎಂದು ಮಹಾರಾಷ್ಟ್ರ ಪೊಲೀಸರು ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಕ್ಸಲರ ಜತೆ ಸಂಪರ್ಕ ಹೊಂದಿರುವ ಮತ್ತು ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ವರವರ ರಾವ್ ಗೃಹ ಬಂಧನದಲ್ಲಿದ್ದರು. ಗೃಹ ಬಂಧನದ ಅವಧಿ ನವೆಂಬರ್ 15ಕ್ಕೆ ಕೊನೆಯಾಗಿತ್ತು. ಹೀಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪುಣೆ ಜಿಲ್ಲಾ ನ್ಯಾಯಾಧೀಶರ ಮುಂದೆ ಭಾನುವಾರ ಹಾಜರುಪಡಿಸಿದ್ದರು.

ರಾವ್ ಅವರನ್ನು ಪೊಲೀಸ್ ಬಂಧನಕ್ಕೆ ನೀಡಬೇಕು ಎಂದು ಮನವಿ ಸಲ್ಲಿಸುವಾಗ ನ್ಯಾಯಾಧೀಶರಿಗೆ ಪೊಲೀಸರು ಈ ಮಾಹಿತಿ ನೀಡಿದ್ದಾರೆ.

‘ನಕ್ಸಲ್ ನಾಯಕ ಗಣಪತಿ ಜತೆ ವರವರ ರಾವ್ ಅವರು ಇ–ಮೇಲ್ ವ್ಯವಹಾರ ನಡೆಸಿದ್ದಾರೆ. ಇ–ಮೇಲ್‌ನಲ್ಲಿ ಹಲವು ಸಂಕೇತಪದಗಳನ್ನು ಬಳಸಲಾಗಿದೆ. ಈ ವಿಚಾರದಲ್ಲಿ ರಾವ್ ಅವರ ವಿಚಾರಣೆ ನಡೆಸಬೇಕಿದೆ. ಹೀಗಾಗಿ ಅವರನ್ನು ಪೊಲೀಸ್ ಬಂಧನಕ್ಕೆ ಒಪ್ಪಿಸಬೇಕು’ ಎಂದು ಸರ್ಕಾರಿ ವಕೀಲರು ವಾದಿಸಿದರು.

ರಾವ್ ಅವರನ್ನು ನವೆಂಬರ್ 26ರವರೆಗೆ ಪೊಲೀಸ್ ಬಂಧನಕ್ಕೆ ನೀಡಲಾಗಿದೆ.

‘ವರವರ ರಾವ್ ಸೇರಿದಂತೆ ಐದೂ ಆರೋಪಿಗಳ ವಿರುದ್ಧದ ಆರೋಪಪಟ್ಟಿಯಲ್ಲಿ ದೇಶದ್ರೋಹ, ಸರ್ಕಾರದ ವಿರುದ್ಧ ಸಂಚು ರೂಪಿಸಿದ ಸೆಕ್ಷನ್‌ಗಳನ್ನು ಸೇರಿಸಲಾಗಿದೆ’ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು