ಭಾನುವಾರ, ಮೇ 16, 2021
22 °C

ಲೈಂಗಿಕ ಕ್ರಿಯೆಗೆ ಒಪ್ಪದ ಸಂಗಾತಿಯ ಕೊಲ್ಲಲು ಯತ್ನಿಸಿದ ಸಲಿಂಗಕಾಮಿ, ಬಂಧನ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪುಣೆ: ಲೈಂಗಿಕ ಕ್ರಿಯೆಗೆ ಒಪ್ಪದ ತನ್ನ ಸಂಗಾತಿಯನ್ನೇ ಕೊಲ್ಲಲು ಯತ್ನಿಸಿದ ಸಲಿಂಗಕಾಮಿಯನ್ನು(23) ಪುಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. 

ಈ ಘಟನೆಯು ಬುಧವಾರ ಬೆಳಿಗ್ಗೆ ದೂರುದಾರನ ಮನೆಯಲ್ಲಿ ನಡೆದಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 307ರ (ಕೊಲೆಯತ್ನ) ಅಡಿಯಲ್ಲಿ ಖಾಡಕ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಸಲಿಂಗಕಾಮಿಗಳು ಸತತ ಎರಡು ವರ್ಷಗಳಿಂದ ಜೊತೆಯಲ್ಲಿ ವಾಸವಾಗಿದ್ದರು. ಮಂಗಳವಾರ ಇವರಿಬ್ಬರ ನಡುವೆ ಲೈಂಗಿಕ ಕ್ರಿಯೆ ನಡೆದಿದೆ. ಆರೋಪಿ ಬುಧವಾರ ಬೆಳಿಗ್ಗೆ ಪುನಃ ಬೇಡಿಕೆ ಇಟ್ಟಿದ್ದಾನೆ. ಆದರೆ ಇದನ್ನು ದೂರುದಾರ ನಿರಾಕರಿಸಿದ್ದಾರೆ. ಆಗ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಆಗ ಆರೋಪಿ ಚೂಪಾದ ವಸ್ತುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. 

ಇದೀಗ ದೂರುದಾರ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು