ಪುಣೆ, ಮುಂಬೈ: ಕೋವಿಡ್ 19ರಿಂದಾಗಿ ಪುಣೆಯಲ್ಲಿ ಮಂಗಳವಾರ ರಾತ್ರಿಯಿಂದ ಆರು ಮಂದಿ ಮೃತಪಟ್ಟಿದ್ದು, ಈ ವ್ಯಾಪ್ತಿಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಸಸೂನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಲ್ಕು, ನಾಯ್ಡು ಹಾಗೂ ನೊಬೆಲ್ ಆಸ್ಪತ್ರೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ ಎಂದು ಪಾಲಿಕೆ ಆಯುಕ್ತ ಶೇಖರ್ ಗಾಯಕ್ವಾಡ್ ಬುಧವಾರ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಬಹುತೇಕ ಮಧುಮೇಹ ಹಾಗೂ ಇತರೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನವರು 50 ವರ್ಷ ಮೇಲ್ಪಟ್ಟವರಾಗಿದ್ದು, ಒಬ್ಬರ ವಯಸ್ಸು ಮತ್ತು ಮಾಹಿತಿ ಲಭ್ಯವಾಗಬೇಕಷ್ಟೆ ಎಂದು ಹೇಳಿದ್ದಾರೆ.

ಮೂವರಿಗೆ ಸೋಂಕು: ಧಾರಾವಿ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ ಹತ್ತಕ್ಕೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.