ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧ ತಂದೆ ತಾಯಿಯ ತೊರೆದರೆ ಜೈಲು: ಕಾನೂನಿಗೆ ಬಿಹಾರ ಸರ್ಕಾರ ಒಪ್ಪಿಗೆ

Last Updated 12 ಜೂನ್ 2019, 4:48 IST
ಅಕ್ಷರ ಗಾತ್ರ

ಪಟನಾ: ವಯಸ್ಸಾದ ತಂದೆ ತಾಯಿಯನ್ನು ಆರೈಕೆ ಮಾಡದೆ ತೊರೆಯುವ ಮಕ್ಕಳಿಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವಕ್ಕೆಬಿಹಾರದ ಸರ್ಕಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ವೃದ್ಧ ತಂದೆ ತಾಯಿಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳದ ಮಕ್ಕಳಿಗೆ (ಮಗ/ಮಗಳು) ಗರಿಷ್ಠ ಜೈಲು ಶಿಕ್ಷೆ ವಿಧಿಸಲು ಸಾಮಾಜ ಕಲ್ಯಾಣ ಇಲಾಖೆಯು ತನ್ನ ಪ್ರಸ್ತಾವದಲ್ಲಿ ಉಲ್ಲೇಖಿಸಿದೆ.

ಯಾವುದೇ ವೃದ್ಧ ದಂಪತಿಯು ಈ ಕಾನೂನಿನ ಅಡಿಯಲ್ಲಿ ತಮ್ಮ ಮಕ್ಕಳ ವಿರುದ್ಧ ದೂರು ದಾಖಲಿಸಿದರೆ, ಜಾಮೀನು ರಹಿತ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.

ಮಂಗಳವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಹಾರ ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT