ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್: ಜೈಲಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ಭಗವಾನ್‌ಪುರಿಯಾಗೆ ಕೊರೊನಾ

Last Updated 5 ಮೇ 2020, 11:58 IST
ಅಕ್ಷರ ಗಾತ್ರ

ಬಟಾಲ: ಪಂಜಾಬ್‌ನ ಧಿಲ್‌ವಾನ್ ಗ್ರಾಮದ ಸರಪಂಚರ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಜಗ್ಗು ಭಗವಾನ್‌ಪುರಿಯಾಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೇ 2ರಂದು ಭಗವಾನ್‌ಪುರಿಯಾನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಲಾಗಿತ್ತು. ಆ ವೇಳೆ ಆತನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇದೀಗ ಆತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ ಎಂದು ಬಟಾಲದ ಎಸ್‌ಎಸ್‌ಪಿ ಒಪಿಂದರ್‌ಜಿತ್ ಸಿಂಗ್ ತಿಳಿಸಿದ್ದಾರೆ.

ಭಗವಾನ್‌ಪುರಿಯಾಗೆ ಎಲ್ಲಿಂದ ಸೋಂಕು ತಗುಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ. ನೇರವಾಗಿ ಮತ್ತು ಪರೋಕ್ಷವಾಗಿ ಆತನ ಸಂಪರ್ಕಕ್ಕೆ ಬಂದವರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಪಟ್ಟಿಯಲ್ಲಿ ಕೆಲವು ಡಿಎಸ್‌ಪಿ ರ್‍ಯಾಂಕ್ ಅಧಿಕಾರಿಗಳೂ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿ ಇದ್ದಾರೆ. ಅವರನ್ನೆಲ್ಲ ಕ್ವಾರಂಟೈನ್‌ ಮಾಡಲಾಗಿದ್ದು, ಅವರ ಗಂಟಲಿನ ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದೂ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಪಟಿಯಾಲ ಕೇಂದ್ರ ಕಾರಾಗೃಹದಲ್ಲಿದ್ದ ಭಗವಾನ್‌ಪುರಿಯಾನನ್ನು ಕೊಲೆ ಪ್ರಕರಣದ ತನಿಖೆಗಾಗಿ ಏಪ್ರಿಲ್ 30ರಂದು ಬಟಾಲ ಪೊಲೀಸರು ಕರೆತಂದಿದ್ದರು.

2011ರಿಂದ ಈಚೆಗೆ ಭಗವಾನ್‌ಪುರಿಯಾ ವಿರುದ್ಧ ಕೊಲೆ, ಕಳ್ಳತನ, ಡಕಾಯಿತಿ, ಸರಗಳ್ಳತನ ಸೇರಿದಂತೆ ಒಟ್ಟು 59 ಪ್ರಕರಣಗಳು ದಾಖಲಾಗಿವೆ. 2019ರ ಅಕ್ಟೋಬರ್‌ನಲ್ಲಿ ಜಲಂಧರ್‌ನಲ್ಲಿ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT