ಗುರುವಾರ , ಮೇ 28, 2020
27 °C

ಪಂಜಾಬ್‌ನಲ್ಲಿ ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣ ಶೇ. 91

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಢಿಗಡ: ಪಂಜಾಬ್‌ನಲ್ಲಿ ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣವು ಶೇ. 91ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಒಟ್ಟಾರೆ 2,029 ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ 1847 ಮಂದಿ ಚೇತರಿಸಿಕೊಂಡಿದ್ದಾರೆ. 

ಇದೇ ವೇಳೆ ಪಂಜಾಬ್‌ನಲ್ಲಿ ಶುಕ್ರವಾರ ಕೇವಲ ಒಂದು ಕೋವಿಡ್‌ ಸೋಂಕು ಪ್ರಕರಣ ಮಾತ್ರ ವರದಿಯಾಗಿದೆ. 

ಇನ್ನು ಕೊರೊನಾ ವೈರಸ್‌ ಮಹಾಮಾರಿಗೆ ಪಂಜಾಬ್‌ನಲ್ಲಿ ಈ ವರೆಗೆ 39 ಮಂದಿ ಬಲಿಯಾಗಿದ್ದಾರೆ. 

ರಾಷ್ಟ್ರ ಮಟ್ಟದಲ್ಲಿ ನೋಡುವುದಾದರೆ, ಕೋವಿಡ್‌–19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 6,654 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ವೇಳೆ 137 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 1,25,101 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಲ್ಲಿ 48,533 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 3,720ಕ್ಕೆ ಏರಿಕೆಯಾಗಿದ್ದು, 69,597 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು