ಭಾನುವಾರ, ಜೂನ್ 7, 2020
22 °C

ಏಕಕಾಲಕ್ಕೆ ಎರಡು ಪದವಿ: ಯುಜಿಸಿ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿದ್ಯಾರ್ಥಿಗಳು ಏಕಕಾಲಕ್ಕೆ ಎರಡು ಪದವಿಗಳನ್ನು ಪಡೆಯಲು ಇನ್ನು ಮುಂದೆ ಅವಕಾಶ ದೊರೆಯಲಿದೆ.

ಈ ಪ್ರಸ್ತಾವನೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಒಪ್ಪಿಗೆ ನೀಡಿದೆ. ಆದರೆ, ಒಂದು ಪದವಿಯನ್ನು ರೆಗ್ಯುಲರ್‌ ಆಗಿ ಮತ್ತು ಇನ್ನೊಂದು ಪದವಿಯನ್ನು ಆನ್‌ಲೈನ್‌ ದೂರಶಿಕ್ಷಣದ ಮೂಲಕ ಪಡೆಯಬೇಕು ಎಂದು ಸೂಚಿಸಿದೆ.

’ಶೀಘ್ರ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ಆಯೋಗದ ಇತ್ತೀಚಿನ ಸಭೆಯಲ್ಲಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗಿದೆ‘ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್‌ ಜೈನ್‌ ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳಲು ಕಳೆದ ವರ್ಷ ಯುಜಿಸಿ ಉಪಾಧ್ಯಕ್ಷ ಭೂಷಣ್‌ ಪಟವರ್ಧನ್‌ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ವಿದ್ಯಾರ್ಥಿಗಳು ಒಂದೇ ವಿಭಾಗದ ಅಥವಾ ಬೇರೆ ವಿಭಾಗದ ವಿಷಯಗಳನ್ನು ಏಕಕಾಲಕ್ಕೆ ಆಯ್ಕೆ ಮಾಡಿಕೊಳ್ಳಬಹುದು ಎಂದು  ಅವರು ತಿಳಿಸಿದ್ದಾರೆ.

 ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲು ಯುಜಿಸಿ  2012ರಲ್ಲೂ ಸಮಿತಿ ರಚಿಸಿತ್ತು. ಆದರೆ, ಸಮಿತಿ ವರದಿಗೆ ಒಪ್ಪಿಗೆ ದೊರೆತಿರಲಿಲ್ಲ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು