ಭಾರತಕ್ಕೆ ಆಗಮಿಸಲಿರುವ ಪುಟಿನ್‌

7

ಭಾರತಕ್ಕೆ ಆಗಮಿಸಲಿರುವ ಪುಟಿನ್‌

Published:
Updated:

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ (ಸೆ.4) ಭಾರತಕ್ಕೆ ಬರಲಿದ್ದಾರೆ.

ಈ ಸಂದರ್ಭದಲ್ಲಿ ಎಸ್‌–400 ವಾಯು ಪ್ರದೇಶ ರಕ್ಷಣಾ ವ್ಯವಸ್ಥೆ ಕುರಿತು ಭಾರತ–ರಷ್ಯಾ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಇರಾನ್‌ದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಬಗ್ಗೆ ಅಮೆರಿಕದ ನಿರ್ಬಂಧಗಳು ಸೇರಿದಂತೆ ಪ್ರಾದೇಶಿಕ ಹಾಗೂ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಪುಟಿನ್ ಅವರು 19ನೇ ಭಾರತ-ರಷ್ಯಾ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ನಡೆಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !