ಲಖನೌ: ಸಿಎಎ ಪ್ರತಿಭಟನೆ ಕುರಿತು ಸೇನಾ ಮುಖ್ಯಸ್ಥ ಜ.ಬಿಪಿನ್ ರಾವುತ್ ನೀಡಿರುವ ಹೇಳಿಕೆಗೆ ಬಿಜೆಪಿಯ ಹಿರಿಯ ಮುಖಂಡ ಹಾಗೂ ಶಾಸಕ ರಾಧಾಮೋಹನ್ ದಾಸ್ ಅಗರ್‌ವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ರಾಧಾಮೋಹನ್ ದಾಸ್, ‘ರಾವುತ್ ಅವರ ಹೇಳಿಕೆಯು ಸೇನಾ ಕಾಯ್ದೆಯ ಉಲ್ಲಂಘನೆಯಾಗಿದ್ದು, ರಾಜಕೀಯ ಸ್ವರೂಪದ್ದಾಗಿವೆ. ಸರ್ಕಾರವು,ರಾವುತ್ ಅವರನ್ನು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥನನ್ನಾಗಿ ನೇಮಿಸಬಾರದು’ ಎಂದು ಒತ್ತಾಯಿಸಿದ್ದಾರೆ.
‘ಭಾರತೀಯ ಸೇನೆಯು ರಾಜಕೀಯ ವಿರೋಧಿ ಸಂಸ್ಥೆ ಎಂದು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಈ ಗುರುತನ್ನು ಕಳೆದುಕೊಂಡಲ್ಲಿ ನಾವೂ ಪಾಕಿಸ್ತಾನದಂತೆಯೇ ಆಗುತ್ತೇವೆ’ ಎಂದು ರಾಧಾಮೋಹನ್ ದಾಸ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.