ರಫೇಲ್ ವಿವಾದ: ‘ಸುಪ್ರೀಂ’ ಮೆಟ್ಟಿಲು ಹತ್ತಿದ ಎಎಪಿ

7

ರಫೇಲ್ ವಿವಾದ: ‘ಸುಪ್ರೀಂ’ ಮೆಟ್ಟಿಲು ಹತ್ತಿದ ಎಎಪಿ

Published:
Updated:

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿದೆ ಎಂಬ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಆಮ್‌ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್ ಸೇರಿದಂತೆ ಕೆಲವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಹಿಂದೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ನಾಲ್ಕು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ಡಿಸೆಂಬರ್‌ 14ರಂದು ವಜಾ ಮಾಡಿತ್ತು. ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕ್ರಿಯೆಯಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಈ ಮಧ್ಯೆ ಎಎಪಿ ಪಕ್ಷದ ಸಂಜಯ್ ಸಿಂಗ್‌, ವಕೀಲ ಎಂ.ಎಲ್‌ .ಶರ್ಮಾ ಹಾಗೂ ವಿನಿತ್‌ ಧಂಡಾ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲದೇ ಬಿಜೆಪಿಯ ಬಂಡಾಯ ನಾಯಕರಾದ ಅರುಣ್‌ ಶೌರಿ, ಯಶವಂತ ಸಿನ್ಹಾ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !