ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್‌: ತೆರೆದ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Last Updated 26 ಫೆಬ್ರುವರಿ 2019, 19:42 IST
ಅಕ್ಷರ ಗಾತ್ರ

ನವದೆಹಲಿ: ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ ನೀಡಿದ್ದ ತೀರ್ಪಿನ ಪುನರ್‌ ಪರಿಶೀಲನೆ ಮಾಡಲು ಅರ್ಜಿಯ ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿಸಿದೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್‌ ಮತ್ತು ಕೆ.ಎಂ. ಜೋಸೆಫ್‌ ಅವರನ್ನು ಒಳಗೊಂಡ ಪೀಠ, ‘ಅರ್ಜಿದಾರರ ಕೋರಿಕೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ’ ಎಂದಿತು.

ಮುಚ್ಚಿದ ಬಾಗಿಲ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಡಿಸೆಂಬರ್‌ನಲ್ಲಿ ಈ ಕುರಿತು ತೀರ್ಪು ನೀಡಿತ್ತು. ಭಾರತ ಮತ್ತು ಫ್ರಾನ್ಸ್‌ ನಡುವೆ 36 ರಫೇಲ್‌ ಯುದ್ಧವಿಮಾನಗಳ ಖರೀದಿಗೆ ಸಂಬಂಧಿಸಿದ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT