ರಫೇಲ್: ಸಿಎಜಿ ವರದಿ ಇಂದು ಮಂಡನೆ?

ನವದೆಹಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗೆಗಿನ ಮಹಾಲೇಖಪಾಲರ (ಸಿಎಜಿ) ವರದಿಯನ್ನು ಸಂಸತ್ತಿನಲ್ಲಿ ಮಂಗಳವಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
16ನೇ ಲೋಕಸಭೆಯ ಕೊನೆಯ ಅಧಿವೇಶನ ಇದಾಗಿದೆ. ಬುಧವಾರ ಅಧಿವೇಶನ ಕೊನೆಯಾಗಲಿದೆ.
ಫ್ರಾನ್ಸ್‌ನಿಂದ 36 ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಿದೆ.
ರಫೇಲ್ ವಿವಾದವು ಸುಪ್ರೀಂ ಕೋರ್ಟ್‌ನ ಅಂಗಳಕ್ಕೂ ತಲುಪಿತ್ತು. ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೋರ್ಟ್ ಹೇಳಿತ್ತು. ಆದರೆ, ಸಂಸತ್ತಿನಲ್ಲಿ ಈ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಮೋದಿ ಅವರು ಅನಿಲ್ ಅಂಬಾನಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬರಹ ಇಷ್ಟವಾಯಿತೆ?
1
0
0
0
0
0 comments
View All