ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಫೇಲ್ ಗೋಪ್ಯ ದಾಖಲೆ ಬಹಿರಂಗ ದೇಶದ ಭದ್ರತೆಗೆ ಅಪಾಯ’

ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ
Last Updated 13 ಮಾರ್ಚ್ 2019, 20:11 IST
ಅಕ್ಷರ ಗಾತ್ರ

ನವದೆಹಲಿ: ರಫೇಲ್ ಒಪ್ಪಂದದ ತೀರ್ಪು ಮರುಪರಿಶೀಲಿಸುವಂತೆ ಅರ್ಜಿದಾರರು ಸಲ್ಲಿಸಿರುವ ದಾಖಲೆಗಳು ಗೋಪ್ಯ ಮಾಹಿತಿಗಳನ್ನು ಒಳಗೊಂಡಿದ್ದು, ಇವು ಬಹಿರಂಗವಾಗುವುದರಿಂದದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ತೀರ್ಪು ಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು, ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

‘ಇವರು ಸಲ್ಲಿಸಿರುವ ದಾಖಲೆಗಳಲ್ಲಿ,ರಫೇಲ್ ಯುದ್ಧವಿಮಾನಗಳ ಯುದ್ಧ ಸಾಮರ್ಥ್ಯ ಕುರಿತ ವಿವರಗಳಿವೆ. ಸಾರ್ವಜನಿಕವಾಗಿ ಲಭ್ಯವಾಗುತ್ತಿರುವ ಈ ದಾಖಲೆಗಳು ಶತ್ರುಗಳಿಗೆ ದೊರಕುವ ಅಪಾಯ ಇದೆ’ ಎಂದುಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿರುವ ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ಉಲ್ಲೇಖಿಸಿದೆ.

‘ಕೇಂದ್ರ ಸರ್ಕಾರ ದಾಖಲೆಗಳ ಗೋಪ್ಯತೆ ಕಾಪಾಡಿದ್ದರೂ, ಅರ್ಜಿದಾರರು ಕೇಂದ್ರ ಸರ್ಕಾರದ ಅನುಮತಿ ಇಲ್ಲದೆ, ಗೋಪ್ಯ ದಾಖಲೆಗಳ ನಕಲು ಪ್ರತಿಗಳನ್ನು ಮಾಡಿಕೊಂಡು ಇವುಗಳನ್ನು ತಮ್ಮ ಅರ್ಜಿಯೊಂದಿಗೆ ಲಗತ್ತಿಸಿದ್ದಾರೆ. ಇದು ಕಳ್ಳತನವಾಗುತ್ತದೆ. ಇದರಿಂದಾಗಿರಫೇಲ್ ಒಪ್ಪಂದದ ನಿಯಮಗಳ ಉಲ್ಲಂಘನೆಯಾಗುತ್ತದೆ. ಇದು ದೇಶದ ಸಾರ್ವಭೌಮತ್ವ, ಭದ್ರತೆ ಹಾಗೂ ವಿದೇಶಗಳ ಜತೆಗಿನ ಸ್ನೇಹಯುತ ಬಾಂಧವ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡುತ್ತದೆ’ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT