ಸಂಸತ್ತಿನ ಹೊರಗೆ ಕಾಗದದ ವಿಮಾನ ಹಾರಿಸಿ ಕಾಂಗ್ರೆಸ್ ಸಂಸದರ ಪ್ರತಿಭಟನೆ

ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ನರೇಂದ್ರ ಮೋದಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಸಂಸದರು ಸಂಸತ್ತಿನ ಹೊರಗೆ ಕಾಗದದ ವಿಮಾನ ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ.
Delhi: Earlier visuals of protest by Congress party, in the Parliament premises over Rafale deal. pic.twitter.com/7ciCSjXmO4
— ANI (@ANI) February 13, 2019
ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮೋದಿ ಸರ್ಕಾರ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಹಗರಣ ನಡೆಸಿದೆ ಎಂದು ಆರೋಪಿಸಿ ಪೋಸ್ಟರ್ ಪ್ರದರ್ಶಿಸಿದ್ದಾರೆ.
ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗಿಯಾಗಿದ್ದಾರೆ.
ಬರಹ ಇಷ್ಟವಾಯಿತೆ?
8
5
1
1
10
0 comments
View All