ಸೋಮವಾರ, ಸೆಪ್ಟೆಂಬರ್ 16, 2019
29 °C

ರಫೇಲ್‌ ತೀರ್ಪು ಮರುಪರಿಶೀಲನೆ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ

Published:
Updated:

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣ ಕುರಿತು ನೀಡಿರುವ ತೀರ್ಪು ಅನ್ನು ಮರುಪರಿಶೀಲಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರ ನೇತೃತ್ವದ ಪೀಠವು ಶುಕ್ರವಾರ ತೀರ್ಪು ಕಾಯ್ದಿರಿಸಿತು.

ರಫೇಲ್‌ ಒಪ್ಪಂದ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಕಳೆದ ವರ್ಷ ಡಿಸೆಂಬರ್‌ 14 ರಂದು ಸುಪ್ರೀಂ ಕೋರ್ಟ್‌ ವಜಾಗೊಳಿಸಿ ತೀರ್ಪು ನೀಡಿತ್ತು. 

ಹಿಂದಿನ ತೀರ್ಪು ಮರುಪರಿಶೀಲಿಸಿ, ಮತ್ತೊಮ್ಮೆ ತನಿಖೆ ನಡೆಸಬೇಕು ಎಂದು ಕೋರಿ ಕೇಂದ್ರದ ಮಾಜಿ ಸಚಿವರಾದ ಯಶವಂತ್‌ ಸಿನ್ಹಾ, ಅರುಣ್‌ ಶೌರಿ ಮತ್ತು ಸಾಮಾಜಿಕ ಹೋರಾಟಗಾರರೂ ಆಗಿರುವ ವಕೀಲ ಪ್ರಶಾಂತ್‌ ಭೂಷಣ್‌ ಅವರು ಅರ್ಜಿ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ರಫೇಲ್ ಡೀಲ್‌: ಸುಪ್ರೀಂಕೋರ್ಟ್‌ ತೀರ್ಪಿನ ನಂತರವೂ ಬಗೆಹರಿಯದೆ ಉಳಿದ 6 ಪ್ರಶ್ನೆಗಳು

ಎರಡು ಗಂಟೆಗಳವರೆಗೆ ನಡೆದ ವಿಚಾರಣೆಯಲ್ಲಿ ಪ್ರಶಾಂತ್‌ ಭೂಷಣ್‌ ಅವರು, ‘ಕೋರ್ಟ್‌ಗೆ ಹಲವು ಅಂಶಗಳನ್ನು ತಿಳಿಸದೇ ಮುಚ್ಚಿಡ
ಲಾಗಿದೆ. ಆದ್ದರಿಂದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ’ ಎಂದು ಕೋರಿದರು. 

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರು, ಮರುಪರಿಶೀಲನಾ ಅರ್ಜಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. 

ಇದನ್ನೂ ಓದಿ: ರಫೇಲ್ ಹಗರಣ? ನಿರ್ಲಕ್ಷಿಸಲು ಸಾಧ್ಯವಿಲ್ಲದಷ್ಟು ವಿಷಯಗಳಿವೆ

Post Comments (+)