ಶುಕ್ರವಾರ, ಏಪ್ರಿಲ್ 23, 2021
32 °C

ರಫೇಲ್‌: ಪಿಎಸಿ ಪರಿಶೀಲನೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರ್ಕಾರದಿಂದ ಯಾವುದೇ ಲೋಪ ಆಗಿಲ್ಲ ಎಂದು ಮಹಾಲೇಖಪಾಲರು (ಸಿಎಜಿ) ವರದಿ ನೀಡಿದ್ದರು. ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು (ಪಿಎಸಿ) ಇದನ್ನು ಪರಿಶೀಲನೆಗೆ ಒಳಪಡಿಸಲಿದೆ.

ಭಾರತದ ವಾಯುಪಡೆಯ ಕಾರ್ಯಾಚರಣೆ ಸನ್ನದ್ಧತೆಯೂ ಪರಿಶೀಲನೆಗೆ ಒಳಪಡಲಿದೆ. ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್ ಚೌಧುರಿ ಅವರು ಪಿಎಸಿಯ ಅಧ್ಯಕ್ಷ.

ರಕ್ಷಣೆಯಿಂದ ಹಿಡಿದು ಕೃಷಿವರೆಗೆ ಸಿಎಜಿ ನೀಡಿರುವ ಹಲವು ವರದಿಗಳನ್ನು ಪರಿಶೀಲನೆಗೆ ಒಳಪಡಿಸಲು ಪಿಎಸಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್‌ ವಿಮಾ ಯೋಜನೆಯು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರಿ ಚರ್ಚೆಗೆ ಒಳಗಾಗಿತ್ತು. ಈ ವಿಚಾರವನ್ನೂ ಪರಿಶೀಲನೆ ನಡೆಸಲು ಸಮಿತಿಯು ನಿರ್ಧರಿಸಿದೆ. 

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯ ಸಮರ್ಪಕವಾಗಿಲ್ಲ ಎಂದು ಟೀಕೆಗಳು ಕೇಳಿ ಬಂದಿದ್ದವು. ಜಿಎಸ್‌ಟಿ ಜಾರಿಯನ್ನೂ ಪರಿಶೀಲಿಸಲು ಸಿಎಜಿ ನಿರ್ಧರಿಸಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು