ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಮೀಸಾ ಪರ ರಾಹುಲ್‌ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಯುಪಿಎಯ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಬಿಹಾರದಲ್ಲಿ ಲಾಲುಪ್ರಸಾದ್‌ ಅವರ ಪುತ್ರಿ ಮೀಸಾ ಭಾರತಿ ಪರ ಪ್ರಚಾರ ನಡೆಸಲಿದ್ದಾರೆ.

‘ಮೇ 16ರಂದು ಮೀಸಾ ಭಾರತಿ ಮತ್ತು ಶತ್ರುಘ್ನ ಸಿನ್ಹಾ ಅವರ ಪರವಾಗಿ ರಾಹುಲ್‌ ಪ್ರಚಾರ ನಡೆಸಲಿದ್ದಾರೆ’ ಎಂದು ಕಾಂಗ್ರೆಸ್‌ನ ಬಿಹಾರ ಘಟಕದ ಅಧ್ಯಕ್ಷ ಮದನಮೋಹನ ಝಾ ತಿಳಿಸಿದ್ದಾರೆ. ಮೀಸಾ ಅವರು ಪಾಟಲೀಪುತ್ರ ಕ್ಷೇತ್ರದಿಂದ ಆರ್‌ಜೆಡಿ ಅಭ್ಯರ್ಥಿಯಾಗಿ ಮತ್ತು ಶತ್ರುಘ್ನ ಸಿನ್ಹಾ ಅವರು ಪಟ್ನಾಸಾಹಿಬ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಲೋಕಸಭೆಯ ಮಾಜಿ ಸ್ಪೀಕರ್‌ ಮೀರಾ ಕುಮಾರ್‌ ಅವರು ಸ್ಪರ್ಧಿಸಿರುವ ಸಸಾರಾಂ ಕ್ಷೇತ್ರದಲ್ಲೂ ರಾಹುಲ್‌ ಗಾಂಧಿ ಅವರ ರ್‍ಯಾಲಿ ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು