ಮಂಗಳವಾರ, ಮೇ 18, 2021
30 °C

ಕೇರಳಕ್ಕೆ ಸೂಕ್ತ ಪರಿಹಾರ ನೀಡದ ಕೇಂದ್ರ ಸರ್ಕಾರ: ರಾಹುಲ್‌ ಗಾಂಧಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ಕೊಚ್ಚಿ: ಪ್ರವಾಹಪೀಡಿತ ಕೇರಳಕ್ಕೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಿಲ್ಲ. ರಾಜ್ಯದ ಸಮಸ್ಯೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸ್ಪಂದಿಸಿಲ್ಲ. ಇದರಿಂದ ಬೇಸರವಾಗಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಕೇಂದ್ರ ಸರ್ಕಾರದಿಂದ ನೆರವು ಪಡೆದುಕೊಳ್ಳುವುದು ಪ್ರವಾಹದಿಂದ ತತ್ತರಿಸಿರುವ ಕೇರಳದ ಹಕ್ಕು. ಆದರೆ ಕೇಂದ್ರ ಈ ನಿಟ್ಟಿನಲ್ಲಿ ಸಾಕಷ್ಟು ನೆರವು ನೀಡಿಲ್ಲ’ ಎಂದು ಆರೋಪಿಸಿದರು.

ಪ್ರವಾಹ ನಿಧಿಗೆ ಯುಎಇ ನೆರವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಯಾರಾದರೂ ಷರತ್ತುಗಳಿಲ್ಲದೆ ಹಣ ನೀಡಲು ಮುಂದಾದರೆ ನಾನಾಗಿದ್ದರೆ ಸ್ವೀಕರಿಸುತ್ತಿದ್ದೆ. ಕೇರಳವನ್ನು ಮತ್ತೆಕಟ್ಟುವ ಕಾರ್ಯಕ್ಕೆ ಯುಎಇ ಸೇರಿದಂತೆ ವಿದೇಶದ ನೆರವು ಪಡೆದುಕೊಳ್ಳಬಹುದು ಎಂದು ಹೇಳಿದರು.

‌ಪ್ರವಾಹ ಪೀಡಿತ ಪ್ರದೇಶಗಳಿಗೆ ಎರಡು ದಿನಗಳ ಭೇಟಿ ನೀಡಿರುವ ರಾಹುಲ್‌, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಂಗಳವಾರ ಮಾತನಾಡಿದರು.

‘ರಾಜ್ಯದ ವಿವಿಧ ಭಾಗದ ಪರಿಹಾರ ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿದ್ದೇನೆ. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಳ್ಳಲು ₹10 ಸಾವಿರವನ್ನು ಆದಷ್ಟು ಬೇಗ ನೆರವು ನೀಡಬೇಕು. ಪ್ರವಾಹದಿಂದ ತೊಂದರೆಗೊಳಗಾದವರು ಮಾನಸಿಕವಾಗಿ ಕುಗ್ಗಿದ್ದು, ಅವರಿಗೆ ಆಪ್ತ ಸಮಾಲೋಚನೆ ಅಗತ್ಯವಿದೆ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು