ರಾಹುಲ್ ನಾಮಪತ್ರ ಇಂದು

ಶುಕ್ರವಾರ, ಏಪ್ರಿಲ್ 19, 2019
22 °C

ರಾಹುಲ್ ನಾಮಪತ್ರ ಇಂದು

Published:
Updated:
Prajavani

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. 

ನಕ್ಸಲರ ಬೆದರಿಕೆ ಕಾರಣ ವಯನಾಡ್‌ನ ಕಲ್ಪೆಟ್ಟ ಪಟ್ಟಣದಲ್ಲಿ ಪೊಲೀಸ್ ಇಲಾಖೆ ಹಾಗೂ ವಿಶೇಷ ರಕ್ಷಣಾ ಪಡೆ ಬಿಗಿ ಭದ್ರತೆ ಒದಗಿಸಿವೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಕ್ಸಲ್ ನಾಯಕನನ್ನು ಪೊಲೀಸರು ಎನ್‌ಕೌಂಟರ್ ಮಾಡಿದ್ದರು. 

ಹೆಲಿಕಾಪ್ಟರ್ ಮೂಲಕ ಗುರುವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ಕೋಯಿಕ್ಕೋಡ್‌ನಿಂದ ಕಲ್ಪೆಟ್ಟ ಪಟ್ಟಣವನ್ನು ತಲುಪುವ ನಿರೀಕ್ಷೆಯಿದೆ. ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಹುಲ್‌ಗೆ ಜೊತೆ ಇರಲಿದ್ದಾರೆ. ರೋಡ್‌ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. 

ವಯನಾಡ್‌ನಲ್ಲಿ ರಾಹುಲ್ ಚುನಾವಣಾ ಪ್ರಚಾರದ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಏಪ್ರಿಲ್ 15ರ ಬಳಿಕ ಅವರು ಪ್ರಚಾರದಲ್ಲಿ ತೊಡಗುವ ಸಾಧ್ಯತೆಯಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !